ಸುಳ್ಯ: ನಗರದ ಹಳೆಗೇಟು ಸಮೀಪ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬರೆಗೆ ಗುದ್ದಿ ಬಳಿಕ ಪಕ್ಕದಲ್ಲಿ ನಿಲ್ಲಿಸಿದ್ದ ಸ್ಕಾರ್ಪಿಯೊಗೆ ಡಿಕ್ಕಿಯಾಗಿರುವ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ.
ಸುಳ್ಯ ಭಾಗದಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಕಾರು, ಹಳೆಗೇಟು ಪೆಟ್ರೋಲ್ ಬಂಕ್ ಬಳಿ ರಸ್ತೆಯ ಬಲಭಾಗದ ಗುಡ್ಡಕ್ಕೆ ಹತ್ತಿ ಅಲ್ಲಿಂದ ಹೊರ ಬಂದು ಮನೆಯ ಮುಂಭಾಗದ ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕಾರ್ಪಿಯೊ ವಾಹನಕ್ಕೆ ಢಿಕ್ಕಿಯಾಗಿದೆ. ಘಟನೆಯಿಂದ ಎರಡೂ ವಾಹನಗಳು ಜಖಂಗೊಂಡಿದ್ದು ಕಾರಿನಲ್ಲಿದ್ದ ಪ್ರಯಾಣಿಕರಿಗೆ ಅಲ್ಪಸ್ವಲ್ಪ ಗಾಯಗಳಾಗಿವೆ.