More

    ನಾಳೆಯಿಂದ ಕಾರ್‌ಸ್ಟ್ರೀಟ್ ದ್ವಿಚಕ್ರ ವಾಹನ ಸಂಚಾರ ಮುಕ್ತ

    ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯಡಿ 17 ಕೋಟಿ ರೂ. ವೆಚ್ಚದಲ್ಲಿ ನಗರದ ರಥಬೀದಿಯಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಡಿ.1ರಿಂದ ದ್ವಿಚಕ್ರ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಶಾಸಕ ಡಿ.ವೇದವ್ಯಾಸ ಕಾಮತ್ ತಿಳಿಸಿದ್ದಾರೆ.

    ಸ್ಮಾರ್ಟ್‌ಸಿಟಿ ಅಧಿಕಾರಿಗಳೊಂದಿಗೆ ಸೋಮವಾರ ಕಾಮಗಾರಿ ವೀಕ್ಷಣೆ ನಡೆಸಿದ ಸಂದರ್ಭ ಮಾತನಾಡಿದ ಶಾಸಕರು, ರಸ್ತೆ ಕಾಂಕ್ರೀಟೀಕರಣ ಬಹುತೇಕ ಪೂರ್ಣಗೊಂಡಿದೆ. ಚರಂಡಿ ಹಾಗೂ ಮೆಸ್ಕಾಂ ಸಂಬಂಧಪಟ್ಟ ಕಾಮಗಾರಿ ಬಾಕಿ ಉಳಿದಿದೆ. ಹಾಗಾಗಿ ಸಾರ್ವಜನಿಕರು ಹಾಗೂ ಸ್ಥಳೀಯ ವ್ಯಾಪಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗುವುದು ಎಂದರು.
    ಸಾರ್ವಜನಿಕರ ಸಹಕಾರದಿಂದ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಸಾಧ್ಯವಾಗಿದೆ. ಮೆಸ್ಕಾಂ ಹಾಗೂ ಚರಂಡಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ವಾರದೊಳಗೆ ಎಲ್ಲ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಶಾಸಕ ಕಾಮತ್ ತಿಳಿಸಿದೆರು.

    ಮನಪಾ ಆರೋಗ್ಯ ಸ್ಥಾಯಿ ಸಮಿತಿ ಅದ್ಯಕ್ಷೆ ಪೂರ್ಣಿಮಾ, ಬಿಜೆಪಿ ಮುಖಂಡರಾದ ಮುರಳೀಧರ ನಾಯಕ್, ರಮೇಶ್ ಹೆಗ್ಡೆ, ಹರಿ ಪ್ರಸಾದ್, ನಾಗರಿಕ ಹಿತ ರಕ್ಷಣಾ ಸಮಿತಿಯ ಅಧ್ಯಕ್ಷ ಹನುಮಂತ ಕಾಮತ್, ಸ್ಮಾರ್ಟಿಸಿಟಿ ಅಧಿಕಾರಿಗಳಾದ ಲಿಂಗೇಗೌಡ, ಅರುಣ್‌ಪ್ರಭಾ, ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts