ಬಿಜೆಪಿ ಕಾರ್ಯಕರ್ತರಿದ್ದ ಕಾರು ಭೀಕರ ಅಪಘಾತ; ಒಬ್ಬರ ಪರಿಸ್ಥಿತಿ ಗಂಭೀರ, ಇತರ ನಾಲ್ವರಿಗೂ ಗಾಯ

Car Accident (1)
Published on

ಉತ್ತರಕನ್ನಡ: ಬಿಜೆಪಿ ಕಾರ್ಯಕರ್ತರು ಪ್ರಯಾಣಿಸುತ್ತಿದ್ದ ಕಾರು ಮತ್ತು ಟ್ಯಾಂಕರ್​ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಬ್ಬರ ಪರಿಸ್ಥಿತಿ ಗಂಭೀರವಾಗಿದೆ. ಇನ್ನು ನಾಲ್ವರಿಗೂ ಗಾಯಗಳಾಗಿದ್ದು, ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉತ್ತರಕನ್ನಡ ಜಿಲ್ಲೆಯ ಶಿರಸಿಯ ಗ್ರಾಮದ ಹಾರೂಗಾರ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ನಿತಿನ್​ ರಾಯ್ಕರ್ ಎಂಬುವರಿಗೆ ಗಂಭೀರ ಗಾಯವಾಗಿದೆ. ಜೊತೆಗಿದ್ದ ವಿ.ಎಂ.ಹೆಗಡೆ, ಪ್ರದೀಪ ಗುನಗಿ, ಗಜಾನನ ರೇವಣಕರ ಹಾಗೂ ಸಂದೇಶ ಎಂಬವರೂ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇವರು ಶಿರಸಿಯಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಕಾರ್ಯಾಗಾರದಲ್ಲಿ ಭಾಗಿಯಾಗಿದ್ದು, ಬಳಿಕ ಅಲ್ಲಿಂದ ಕಾರವಾರಕ್ಕೆ ಮರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net