More

    ಗರ್ಭಿಣಿಯರಿಗೆ ತಾಯಿ ಕಾರ್ಡ್ ಕಡ್ಡಾಯ, ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ.ಸೂಚನೆ

    ಮಂಗಳೂರು: ಗರ್ಭಿಣಿಯರಿಗೆ ತಾಯಿ ಕಾರ್ಡ್ ವಿತರಣೆ ಕಡ್ಡಾಯ, ಇದರಿಂದ ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಮಾಣ ಕಡಿಮೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ಹೇಳಿದರು. ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗರ್ಭಪೂರ್ವ ಮತ್ತು ಜನನಪೂರ್ವ ಲಿಂಗ ನಿರ್ಣಯ ತಡೆ ಕಾಯಿದೆ ಅನುಷ್ಠಾನ ಸಂಬಂಧ ಜಿಲ್ಲಾ ಮಟ್ಟದ ಸಕ್ಷಮ ಪ್ರಾಧಿಕಾರದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಗರ್ಭ ಪೂರ್ವ ಹಾಗೂ ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಮಾಡುವುದು ಕಾನೂನು ಬಾಹಿರವಾಗಿದ್ದು, ಉಲ್ಲಂಘಿಸಿದವರಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗುವುದು. ಏಪ್ರಿಲ್ 2020ರಿಂದ ಜನವರಿ 2021ರ ವರೆಗೆ 11,463 ಗಂಡು ಮಕ್ಕಳು ಹಾಗೂ 10,993 ಹೆಣ್ಣು ಮಕ್ಕಳ ಜನನವಾಗಿದೆ. ಜಿಲ್ಲೆಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳ ಅನುಪಾತದಲ್ಲಿ ಅಸಮತೋಲನ ತಡೆಗಟ್ಟಬೇಕು. ಅನಧಿಕೃತ ವಾಗಿ ಕಾರ್ಯನಿರ್ವಹಿಸುತ್ತಿರುವ ಸ್ಕ್ಯಾನಿಂಗ್ ಸೆಂಟರ್ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದ ಅವರು, ಆಸ್ಪತ್ರೆಗಳಲ್ಲಿ ಭ್ರೂಣ ಲಿಂಗ ಪತ್ತೆ ಕಂಡು ಬಂದರೆ ಸ್ಕ್ಯಾನಿಂಗ್ ಯಂತ್ರ ಸೀಲ್ ಮಾಡಿ ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದರು. ವಿಶೇಷ ತಂಡ ರಚನೆ ಮಾಡಿ, ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಅನಿರೀಕ್ಷಿತ ಭೇಟಿ ನೀಡುವುದರೊಂದಿಗೆ ಅಕ್ರಮ ಪತ್ತೆ ಹಚ್ಚಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

    ದ.ಕ.ಜಿಲ್ಲೆಯಲ್ಲಿ 174 ಸ್ಕಾೃನಿಂಗ್ ಕೇಂದ್ರಗಳು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮಚಂದ್ರ ಬಾಯಾರಿ ಮಾತನಾಡಿ, ದ.ಕ.ಜಿಲ್ಲೆಯಲ್ಲಿ 174 ಸ್ಕ್ಯಾನಿಂಗ್ ಸೆಂಟರ್ ನೊಂದಣಿಯಾಗಿವೆ. ಅವುಗಳಲ್ಲಿ 159 ಕಾರ್ಯನಿರ್ವಹಿಸುತಿದ್ದು, 15 ಕೇಂದ್ರಗಳಲ್ಲಿ ಬೇರೆ ಬೇರೆ ಕಾರಣಗಳಿಂದ ಸ್ಕ್ಯಾನಿಂಗ್ ನಡೆಸುತ್ತಿಲ್ಲ ಎಂದರು. ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿ 148, ತಾಲೂಕು ಆರೋಗ್ಯ ಅಧಿಕಾರಿಗಳು 87 ಕೇಂದ್ರಗಳಿಗೆ ಭೇಟಿ ನೀಡಿದ್ದಾರೆ. ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾಯ್ದೆ ಕಾನೂನುಗಳ ಅನುಷ್ಠಾನದಲ್ಲಿ ಕೆಲವು ನ್ಯೂನ್ಯತೆಗಳು ಕಂಡುಬಂದಿದ್ದು, ಸರಿಪಡಿಸುವಂತೆ ಸೂಚನೆ ನೀಡಲಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts