More

    ಆರೋಗ್ಯದ ಕುರಿತು ಕಾಳಜಿ ಅಗತ್ಯ

    ಚಿಕ್ಕಮಗಳೂರು: ಇಂದಿನ ಜೀವನ ಶೈಲಿಯಲ್ಲಿ ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಇಲ್ಲದಿದ್ದಲ್ಲಿ ಅನಾರೋಗ್ಯಕ್ಕೆ ತುತ್ತಾಗುವುದರಲ್ಲಿ ಅನುಮಾನವಿಲ್ಲ ಎಂದು ಸಿಎಚ್ಓ ಡಾ.ಲಕ್ಷ್ಮೀ ತಿಳಿಸಿದರು.

    ಸಖರಾಯಪಟ್ಟಣ ಸಮೀಪದ ಕುನ್ನಾಳು ಗ್ರಾಮದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಮೂಡಿಗೆರೆ ತೋಟಗಾರಿಕಾ ಮಹಾವಿದ್ಯಾಲಯದಿಂದ ಗ್ರಾಮೀಣ ತೋಟಗಾರಿಕೆ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಿಗೆ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಆರೋಗ್ಯ ತಪಾಸಣೆ ನಡೆಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಜನತೆ ಆಯುಷ್ಮಾನ್ ಭಾರತ್ ಕಾರ್ಡ್ ಮಾಡಿಸಿಕೊಳ್ಳುವ ಮೂಲಕ ಆರೋಗ್ಯ ಸೇವೆಗಳನ್ನು ಪಡೆಯಲು ಮುಂದೆಬರಬೇಕು ಎಂದರು.
    ಆರೋಗ್ಯ ತಪಸ್ಸಣ್ಣ ಶಿಬಿರದಲ್ಲಿ ಬಿಪಿ, ಶುಗರ್, ರಕ್ತಪರೀಕ್ಷೆ, ಜ್ವರ ಹಾಗೂ ಇತರೆ ರೋಗಗಳ ತಪಾಸಣೆ ನಡೆಸಲಾಯಿತು. ಜೊತೆಗೆ ಅಗತ್ಯವಿದ್ದವರಿಗೆ ಸ್ಥಳದಲ್ಲಿಯೇ ಚಿಕಿತ್ಸೆಯನ್ನು ನೀಡಲಾಯಿತು.
    ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಪಂಡಿತಾರಾಧ್ಯ, ಸೋಮಣ್ಣ, ಲತಾ, ಪ್ರಶಿಕ್ಷಣಾರ್ಥಿಗಳಾದ ಚೈತ್ರ, ದೀಕ್ಷಿತಾ, ಪಲ್ಲವಿ, ವಿಶಾಲ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts