

ಗಂಗೊಳ್ಳಿ: ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಗಂಗೊಳ್ಳಿ ಘಟಕ ಹಾಗೂ ಗಂಗೊಳ್ಳಿ ಕೊಸೆಸಾಂವ್ ಮಾತಾ ಚರ್ಚ್‌ನ ಶಿಕ್ಷಣ ಆಯೋಗದ ಆಶ್ರಯದಲ್ಲಿ ವ್ಯಕ್ತಿತ್ವ ವಿಕಸನ ಮತ್ತು ವೃತ್ತಿ ಮಾರ್ಗದರ್ಶನ ಶಿಬಿರ ಗಂಗೊಳ್ಳಿ ಸಂತ ಜೋಸೆಫ್ ವಾಜ್ ಸಭಾಭವನದಲ್ಲಿ ಭಾನುವಾರ ನಡೆಯಿತು.
ಕಲ್ಯಾಣಪುರ ಸಂತ ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ಡಾ.ವಿನ್ಸೆಂಟ್ ಆಳ್ವ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಗಂಗೊಳ್ಳಿ ಚರ್ಚ್ ಧರ್ಮಗುರು ಥೋಮಸ್ ರೋಶನ್ ಡಿಸೋಜ ಉಪಸ್ಥಿತರಿದ್ದರು. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಹಾಗೂ ಇಂಡಿಯಾ ಫೆಡರೇಶನ್ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಎಲ್ರೊಯ್ ಕಿರಣ್ ಕ್ರಾಸ್ಟೊ ಅವರನ್ನು ಸನ್ಮಾನಿಸಲಾಯಿತು.
ಕೆಥೊಲಿಕ್ ಸಭಾ ಗಂಗೊಳ್ಳಿ ಘಟಕದ ಅಧ್ಯಕ್ಷ ಎಡ್ವರ್ಡ್ ಫರ್ನಾಂಡಿಸ್ ಸ್ವಾಗತಿಸಿದರು. ಒಲವಿನ್ ರೆಬೆಲ್ಲೊ ನಿರೂಪಿಸಿದರು. ರೆನಿಟಾ ಬಾರ್ನೆಸ್ ವಂದಿಸಿದರು.