ಸುಬ್ರಹ್ಮಣ್ಯ: ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎಚ್‌ಆರ್ ಅಂಡ್ ಪ್ಲೇಸ್ಮೆಂಟ್ ಸೆಲ್, ರೋಟರಿ ಕ್ಲಬ್ ಸುಬ್ರಹ್ಮಣ್ಯ ಸಹಯೋಗದೊಂದಿಗೆ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಶುಕ್ರವಾರ ಒಂದು ದಿನದ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ನಡೆಯಿತು.
ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಶೇಖರ ನಾಯರ್ ಅಧ್ಯಕ್ಷತೆ ವಹಿಸಿದ್ದರು. ಸುಬ್ರಹ್ಮಣ್ಯ ಗ್ರಾಪಂ ಉಪಾಧ್ಯಕ್ಷ ವೆಂಕಟೇಶ್ ಎಚ್.ಎಲ್. ಉದ್ಘಾಟಿಸಿದರು.
ಉಜಿರೆ ಎಸ್.ಡಿ.ಎಂ.ವಸತಿಯುತ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಕೃಷ್ಣಮೂರ್ತಿ ತರಬೇತಿ ನೀಡಿದರು. ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ದಿನೇಶ ಪಿ.ಟಿ , ಮಹಾವಿದ್ಯಾಲಯದ ಐಕ್ಯೂಎಸಿ ಸಂಯೋಜಕಿ ಲತಾ ಬಿ.ಟಿ., ಸುಬ್ರಹ್ಮಣ್ಯ ರೋಟರಿ ಕ್ಲಬ್ ಕಾರ್ಯದರ್ಶಿ ಚಿದಾನಂದ ಕುಳ, ರೋಟರಿ ಪೂರ್ವಾಧ್ಯಕ್ಷ ಲೋಕೇಶ್ ಬಿ.ಎನ್., ತಾ.ಪಂ.ಮಾಜಿ ಸದಸ್ಯೆ ವಿಮಲಾ ರಂಗಯ್ಯ ಉಪಸ್ಥಿತರಿದ್ದರು. ತೃತೀಯ ಕಲಾ ಪದವಿಯ ಕಲ್ಪನಾ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು. ಮಹಾವಿದ್ಯಾಲಯದ ಎಚ್‌ಆರ್ ಆ್ಯಂಡ್ ಪ್ಲೇಸ್ಮೆಂಟ್ ಸೆಲ್ ಸಂಯೋಜಕಿ ಆರತಿ.ಕೆ ವಂದಿಸಿದರು.