

ಬೆಳ್ತಂಗಡಿ: ಮಾನಸಿಕ ಒತ್ತಡ ನಿವಾರಿಸುವಲ್ಲಿ ಯೋಗ, ಧ್ಯಾನ ಹಾಗೂ ದೈಹಿಕ ವ್ಯಾಯಾಮ ಚಟುವಟಿಕೆಗಳು ಪ್ರಮುಖ ಪಾತ್ರ ವಹಿಸುತ್ತದೆ. ಉತ್ತಮ ಹವ್ಯಾಸಗಳನ್ನು ರೂಢಿಸಿಕೊಂಡು, ಒಳ್ಳೆಯ ಸ್ನೇಹಿತರೊಂದಿಗೆ ಸಂಪರ್ಕ ಮತ್ತು ಸಮಸ್ಯೆ ಎದುರಾದಾಗ ಹಿರಿಯರೊಂದಿಗೆ ಚರ್ಚಿಸಿ ಮಾರ್ಗದರ್ಶನ ಪಡೆಯುವುದು ಅಗತ್ಯವಾಗಿರುತ್ತದೆ. ಈ ಮುಖಾಂತರ ಒತ್ತಡವನ್ನು ಪರಿಣಾಮಕಾರಿಯಾಗಿ ನಿರ್ವಹಿಸಿದಲ್ಲಿ, ವಿದ್ಯಾರ್ಥಿಗಳು ಶೈಕ್ಷಣಿಕ ಹಾಗೂ ವೃತ್ತೀಜಿವನದಲ್ಲಿ ಅಭಿವೃದ್ಧಿ ಕಂಡುಕೊಳ್ಳಬಹುದು ಎಂದು ಯು.ಎ.ಇ.ಯ ಒಎಚ್ಎಸ್ಎಸ್ಎಐ ಫೌಂಡೇಷನ್ ಅಧ್ಯಕ್ಷ ಡಾ.ಹರಿದಾಸ್ ನಾಯರ್ ಹೇಳಿದರು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿ ಹಾಗೂ ಅಧ್ಯಾಪಕ ವೃಂದದೊಂದಿಗೆ ಸಂವಾದದಲ್ಲಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಡಾ.ಅಶೋಕ್ಕುಮಾರ್, ಶ್ರೀ ಶರದ್ವಿಹಾರಿದಾಸ್, ಆಧ್ಯಾತ್ಮಿಕ ಮಾರ್ಗದರ್ಶಕ, ಭಕ್ತಿವೇದಾಂತ ಅಕಾಡೆಮಿ ಮಂಗಳೂರು ಮತ್ತು ಸಿವಿಲ್ ವಿಭಾಗ ಮುಖ್ಯಸ್ಥರಾದ ಡಾ.ರವೀಶ್ಪಡುಮಲೆ ಉಪಸ್ಥಿತರಿದ್ದರು.