More

    ಮೂರನೇ ಅಲೆ ನಿಯಂತ್ರಣಕ್ಕೆ ಅಗತ್ಯ ಕ್ರಮ ; ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿಕೆ

    ತುಮಕೂರು : ಸಂಭವನೀಯ ಮೂರನೇ ಅಲೆ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಂಡಿದ್ದು, ಕರೊನಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.

    ಬೊಮ್ಮನಹಳ್ಳಿಯಲ್ಲಿ ಸೋಮವಾರ ಶ್ರೀಮಾರಮ್ಮ ದೇವಾಲಯದಲ್ಲಿ ನಿರ್ಮಿಸಿರುವ ಸಮುದಾಯ ಭವನ ಉದ್ಘಾಟಿಸಿ ಮಾತನಾಡಿದ ಅವರು, ಕರೊನಾದಿಂದಾಗಿ ಜಗತ್ತು ತತ್ತರಗೊಂಡಿದೆ. ಮುಂಬರುವ ಮೂರನೇ ಅಲೆ ಬಗ್ಗೆ ಜನ ಎಚ್ಚರಿಕೆ ವಹಿಸಬೇಕು. ಕರೊನಾ ಮೂರನೇ ಅಲೆ ಬಗ್ಗೆ ತಜ್ಞರು ಎಚ್ಚರಿಕೆ ನೀಡಿದ್ದು, ಸಾರ್ವಜನಿಕ ಸಭೆ ಸಮಾರಂಭ ಮಾಡುವ ಮುಂಚೆ ಸರ್ಕಾರದ ನಿಯವಾವಳಿ ಪಾಲಿಸಬೇಕು ಎಂದು ಮನವಿ ಮಾಡಿದರು.

    ಕರೊನಾ ಕಾರಣಕ್ಕೆ ಸರ್ಕಾರ ಅಭಿವೃದ್ಧಿ ಕಾರ್ಯಗಳ ಕಡೆ ಗಮನಹರಿಸಲು ಆಗಲಿಲ್ಲ. ಕರೊನಾ ಜತೆ ಜೀವಿಸುವುದನ್ನು ಕಲಿತು ನಾವು ಪ್ರಗತಿ ಸಾಧಿಸಬೇಕಿದೆ. ಆ ನಿಟ್ಟಿನಲ್ಲಿ ಬೊವ್ಮಾಯಿ ಅವರ ನೇತೃತ್ವದಲ್ಲಿ ಸರ್ಕಾರ ತೀರ್ವಾನ ಕೈಗೊಂಡಿದ್ದು, ಮುಂದಿನ ಎರಡು ವರ್ಷ ರಾಜ್ಯದಲ್ಲಿ ನಿರಂತರವಾಗಿ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಲಾಗುವುದು ಎಂದರು.

    ಮಾಜಿ ಶಾಸಕ ಬಿ.ಸುರೇಶ್‌ಗೌಡ ಮಾತನಾಡಿ, ಬಡವರ ಪರವಾಗಿ ಯಾವಾಗಲೂ ಕೆಲಸ ವಾಡುವ ಗೋಪಾಲಯ್ಯ ಅವರಿಗೆ ಊರ್ಡಿಗೆರೆ ಹೋಬಳಿಯ ಗ್ರಾಮಗಳಲ್ಲಿ ನೆಂಟರಿದ್ದಾರೆ. ಅವರ ತಾಯಿಯೂ ಇದೇ ಗ್ರಾಮದವರು ಎಂದರು. ವಿಧಾನ ಪರಿಷತ್ ಸದಸ್ಯ ದೇವೇಗೌಡ, ನರಸಿಂಹಯ್ಯ, ಬಯಲುಸೀಮೆ ಪ್ರಾಧಿಕಾರ ಮಂಡಳಿ ಮಾಜಿ ಅಧ್ಯಕ್ಷ ಕೆ.ಎ.ದೇವರಾಜು, ಮಾರಮ್ಮ ದೇಗುಲ ಟ್ರಸ್ಟ್ ಅಧ್ಯಕ್ಷ ಗಂಗಪ್ಪ, ಕಾರ್ಯದರ್ಶಿ ಹಾಗೂ ಬೊಮ್ಮನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ವಾರೇಗೌಡ, ಗೌರವಾಧ್ಯಕ್ಷ ವೆಂಕಟಸ್ವಾಮಿ, ಸಹ ಕಾರ್ಯದರ್ಶಿ ನಾಗರಾಜು, ಕೆಸರಮಡು ಗ್ರಾಪಂ ಅಧ್ಯಕ್ಷೆ ಸಿದ್ದಗಂಗಮ್ಮ, ಉಪಾಧ್ಯಕ್ಷ ಮನ್ಸೂರ್ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts