More

    ಕರೊನಾಗೆ ಬಲಿಯಾದವರ ಕುಟುಂಬಕ್ಕೆ ನೆರವು ; ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಮಾಹಿತಿ

    ತುಮಕೂರು : ಜಿಲ್ಲೆಯಲ್ಲಿ ಕರೊನಾಗೆ ಬಲಿಯಾಗಿರುವ ಕುಟುಂಬಕ್ಕೆ ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದ್ದು, ಮೃತರ ಕುಟುಂಬದ ಅರ್ಹ ಸದಸ್ಯರಿಗೆ ಪರಿಹಾರ ಲಭ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದರು.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕರೊನಾ ಪರಿಹಾರ ನೀಡುವ ಸಂಬಂಧ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಕರೊನಾದಿಂದ ಮೃತಪಟ್ಟ ಬಡತನದ ರೇಖೆಗಿಂತ ಕೆಳಗಿನ ಕುಟುಂಬದ ಒಬ್ಬ ಕಾನೂನುಬದ್ಧ ವಾರಸುದಾರನಿಗೆ ರಾಜ್ಯ ಸರ್ಕಾರ ೋಷಿಸಿರುವಂತೆ ಸಂಧ್ಯಾ ಸುರಕ್ಷಾ ಯೋಜನೆಯಡಿ 1 ಲಕ್ಷ ಹಾಗೂ ಕೇಂದ್ರ ಸರ್ಕಾರದ ವಾರ್ಗಸೂಚಿಗಳನ್ವಯ ಮೃತಪಟ್ಟ ವ್ಯಕ್ತಿಗಳ ಕಾನೂನು ಬದ್ಧ ವಾರಸುದಾರರಿಗೆ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ 50 ಸಾವಿರ ರೂ. ಪರಿಹಾರ ಒದಗಿಸಲು ಸರ್ಕಾರದ ನಿರ್ದೇಶನ ನೀಡಿದೆ ಎಂದರು.

    ಬಡತನ ರೇಖೆಗಿಂದ ಕೆಳಗಿರುವ ಕುಟುಂಬದ ದುಡಿಯುವ ಸದಸ್ಯರು ಕರೊನಾ ಸೋಂಕಿಗೆ ಒಳಗಾಗಿ ಮೃತಪಟ್ಟಿದ್ದಲ್ಲಿ ಅವರ ಕುಟುಂಬಕ್ಕೆ ಒಂದು ಬಾರಿಗೆ 1ಲಕ್ಷ ರೂ. ಪರಿಹಾರ ಹಾಗೂ ಕರೊನಾದಿಂದ 50 ಸಾವಿರ ರೂ. ಪರಿಹಾರ ಧನ ನೀಡಲಾಗುವುದು ಎಂದರು.
    ಕರೊನಾದಿಂದ ಮೃತಪಟ್ಟ ಬಡತನ ರೇಖೆಗಿಂತ ಕೆಳಗಿರುವ ಅರ್ಹರು ಪರಿಹಾರ ಪಡೆಯಲು ಎಲ್ಲ ತಾಲೂಕು ಕಚೇರಿ, ನಾಡ ಕಚೇರಿ, ಬಾಪೂಜಿ ಸೇವಾ ಕೇಂದ್ರ ಹಾಗೂ ಮಹಾನಗರ ಪಾಲಿಕೆ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು. ವ್ಯಕ್ತಿಯು ರಾಜ್ಯದ ಯಾವುದೇ ಭಾಗದಲ್ಲಿ ಮೃತಪಟ್ಟಿದ್ದರೂ ಅರ್ಜಿದಾರರು ತಮ್ಮ ವಾಸಸ್ಥಳ ವ್ಯಾಪ್ತಿಯಲ್ಲಿಯೇ ಅರ್ಜಿ ಸಲ್ಲಿಸಬೇಕು ಎಂದರು.

    ಎಲ್ಲ ಮೃತ ವ್ಯಕ್ತಿಗಳು ಕರೊನಾ ಕಾರಣಗಳಿಂದಾಗಿಯೇ ಮೃತರಾಗಿರಬೇಕು, ಇದಕ್ಕೆ ಪೂರಕವಾಗಿ ಅಧಿಕೃತ ಮರಣ ಪ್ರವಾಣ ಪತ್ರ ಹೊಂದಿರಬೇಕು. ರಾಜ್ಯ ಸರ್ಕಾರದ ಪರಿಹಾರ ಪಡೆಯಲು ಮೃತ ವ್ಯಕ್ತಿಯು ಬಿಪಿಎಲ್ ಕುಟುಂಬದ ದುಡಿಯುವ ಸದಸ್ಯರಾಗಿರಬೇಕು ಹಾಗೂ ಅರ್ಜಿದಾರರು ಸಹ ಅದೇ ಬಿಪಿಎಲ್ ಕುಟುಂಬದ ಸದಸ್ಯರಾಗಿರಬೇಕು ಎಂದರು.

    ಕರೊನಾದಿಂದ ಮೃತಪಟ್ಟಿರುವ ಕುರಿತು ವೈದ್ಯಕೀಯ ಪ್ರವಾಣ ಪತ್ರ(ಫಾರ್ಮ್ 4/4ಎ) ಸಲ್ಲಿಸಬೇಕು. ಇಲ್ಲದಿದ್ದಲ್ಲಿ ಕರೊನಾದಿಂದ ಮರಣ ದೃಢೀಕರಣ ಸಮಿತಿ ನೀಡುವ ನಿಗದಿತ ಪ್ರವಾಣ ಪತ್ರ ಸಲ್ಲಿಸಬೇಕು. ಪರಿಹಾರ ಸೌಲಭ್ಯ ಪಡೆಯಲು ಮೃತ ವ್ಯಕ್ತಿಯ ವಯಸ್ಸು ಕನಿಷ್ಠ 18 ವರ್ಷ ತುಂಬಿರಬೇಕು ಎಂದರು. ಸಭೆಯಲ್ಲಿ ಡಿಎಚ್‌ಒ ಡಾ.ನಾಗೇಂದ್ರಪ್ಪ, ಜಿಲ್ಲಾ ಶಸಚಿಕಿತ್ಸಕ ಡಾ.ಟಿ.ಎ.ವೀರಭದ್ರಯ್ಯ ಇದ್ದರು.

    ಜಿಲ್ಲೆಯಲ್ಲಿ ಶೇ.76 ಮೊದಲ ಡೋಸ್ ಲಸಿಕಾಕರಣ ಯಶಸ್ವಿ: ರೋಗ ನಿರೋಧಕ ಶಕ್ತಿ ವೃದ್ಧಿಗೆ ಕರೊನಾ ಲಸಿಕೆ ಎರಡನೇ ಡೋಸ್ ಪಡೆಯುವುದು ಕಡ್ಡಾಯವಾಗಿದ್ದು, ಬಾಕಿಯಿರುವ 247718 ಜನರಿಗೂ ಆದ್ಯತೆ ಮೇರೆಗೆ ಲಸಿಕೆ ನೀಡಲು ಅಗತ್ಯ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದರು. ಜಿಲ್ಲೆಯಲ್ಲಿ ಶೇ.76 ಮೊದಲ ಡೋಸ್ ಲಸಿಕಾಕರಣ ಯಶಸ್ವಿಯಾಗಿ ನಡೆದಿದೆ. ಕೋವ್ಯಾಕ್ಸಿನ್ ಮೊದಲನೇ ಡೋಸ್ ಪಡೆದು ಎರಡನೇ ಡೋಸ್ ಪಡೆಯಲು 25513, ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು ಎರಡನೇ ಡೋಸ್ ಪಡೆಯಲು 222205 ಸೇರಿ ಒಟ್ಟು 247718 ಜನರು ಎರಡನೇ ಡೋಸ್ ಲಸಿಕೆ ಪಡೆಯಲು ಬಾಕಿ ಉಳಿದಿದ್ದು, ಅವರೆಲ್ಲರಿಗೂ ಲಸಿಕೆ ನೀಡಲು ಕ್ರಮ ವಹಿಸುವಂತೆ ಸೂಚಿಸಿದರು.

    ಜಿಲ್ಲೆಯ ಚಿಕ್ಕನಾಯಕನಹಳ್ಳಿ ಶೇ.75, ಗುಬ್ಬಿ 76, ಕೊರಟಗೆರೆ 80, ಕುಣಿಗಲ್ 80, ಮಧುಗಿರಿ 67, ಪಾವಗಡ 61, ಶಿರಾ 68, ತಿಪಟೂರು 86, ತುಮಕೂರು 86 ಹಾಗೂ ತುರುವೇಕೆರೆ ತಾಲೂಕಿನಲ್ಲಿ ಶೇ.80 ಲಸಿಕಾ ಪ್ರವಾಣ ನಡೆದಿದೆ ಆದರೆ, ಮಧುಗಿರಿ, ಪಾವಗಡ ಮತ್ತು ಶಿರಾ ತಾಲೂಕಿನಲ್ಲಿ ಉಳಿದ ತಾಲೂಕುಗಳಿಗಿಂತ ಕಡಿಮೆ ಪ್ರವಾಣದಲ್ಲಿ ಲಸಿಕಾಕರಣವಾಗಿದೆ ಎಂದರು.
    ಅ.8ರಂದು ಜಿಲ್ಲೆಯಲ್ಲಿ ಲಸಿಕಾ ಮೇಳ ಹಮ್ಮಿಕೊಳ್ಳಲಾಗಿದ್ದು, ಲಸಿಕಾ ಮೇಳ ಯಶಸ್ವಿಗೊಳಿಸಬೇಕು. ಲಸಿಕಾ ಮೇಳದಲ್ಲಿ ಭಾಗವಹಿಸುವ ಅಧಿಕಾರಿಗಳು ಮೇಳದಲ್ಲಿ ಎರಡನೇ ಡೋಸ್ ಲಸಿಕೆ ಪಡೆಯಲು ಬಾಕಿ ಇರುವವರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲು ಕ್ರಮ ವಹಿಸಬೇಕು ಎಂದು ನಿರ್ದೇಶಿಸಿದರು.

    ತಹಸೀಲ್ದಾರ್ ಅವರಿಂದ ತಂತ್ರಾಂಶದ ಮೂಲಕ ವರ್ಗಾವಣೆಗೊಂಡ ಅರ್ಜಿಯಲ್ಲಿನ ಕರೊನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಸಾವಿನ ವಿವರಗಳನ್ನು ಜಿಲ್ಲಾ ವೈದ್ಯಾಧಿಕಾರಿಗಳಿಂದ ಖಚಿತಪಡಿಸಿಕೊಂಡು ಅರ್ಜಿಯನ್ನು ಕೆಲಸದ ಏಳು ದಿನದೊಳಗೆ ಅನುಮೋದಿಸಿ ಪರಿಹಾರ ವಿತರಣೆಗಾಗಿ ಸಾವಾಜಿಕ ಭದ್ರತೆ ಮತ್ತು ಪಿಂಚಣಿ ನಿರ್ದೇಶನಾಲಯಕ್ಕೆ ತಂತ್ರಾಂಶದ ಮೂಲಕ ವರ್ಗಾಯಿಸಲಾಗುವುದು.
    ವೈ.ಎಸ್.ಪಾಟೀಲ ಜಿಲ್ಲಾಧಿಕಾರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts