More

    ಮಣಿಪಾಲಕ್ಕೆ ಲ್ಯಾಬ್ ಅನುಮತಿ ಯತ್ನ

    ಉಡುಪಿ: ಮಣಿಪಾಲ ಕೆಎಂಸಿಯಲ್ಲಿ ಕೊವಿಡ್ ಪರೀಕ್ಷಾ ಲ್ಯಾಬ್ ತೆರೆಯುವ ಬಗ್ಗೆ ಕೇಂದ್ರ ಆರೋಗ್ಯ ಸಚಿವರೊಂದಿಗೆ ಚರ್ಚಿಸಲಾಗುವುದು. ಜಿಲ್ಲೆಯಲ್ಲಿ ಕೊವಿಡ್ ಪರೀಕ್ಷಾ ಲ್ಯಾಬ್ ಆರಂಭಿಸುವುದರಿಂದ ತ್ವರಿತ ವರದಿ ಲಭಿಸುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ತಪಾಸಣೆಯೂ ಸಾಧ್ಯ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

    ಶುಕ್ರವಾರ ಜಿಪಂ ಸಭಾಂಗಣದಲ್ಲಿ ಕರೊನಾ ನಿಯಂತ್ರಣ ಕುರಿತು ಸಭೆ ನಡೆಸಿದ ಅವರು, ತುರ್ತು ಚಿಕಿತ್ಸೆಗೆ ಆಗಮಿಸುವ ಹೊರಜಿಲ್ಲೆಯ ರೋಗಿಗಳಿಗೆ ಜಿಲ್ಲೆ ಪ್ರವೇಶಿಸಲು ಅನುಮತಿ ನೀಡುವಂತೆ ಹಾಗೂ ರೋಗಿಗಳ ಜತೆ ಒಬ್ಬರು ಅಥವಾ ಅನಿವಾರ್ಯವಿದ್ದಲ್ಲಿ ಗರಿಷ್ಠ ಇಬ್ಬರು ಸಹಾಯಕರು ಬರಲು ಅವಕಾಶ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದರು.
    ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿಗಾಗಿ ಯಾವುದೇ ಕೊರತೆಯಾಗದಂತೆ ಎಲ್ಲ ರೀತಿಯ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದರು.

    5388 ಆಹಾರ ಕಿಟ್ ವಿತರಣೆ: ಜಿಲ್ಲಾಧಿಕಾರಿ ಜಿ.ಜಗದೀಶ್ ಮಾತನಾಡಿ, ಜಿಲ್ಲೆಯಲ್ಲಿ ಸಂಕಷ್ಟದಲ್ಲಿರುವ ಸಾರ್ವಜನಿಕರನ್ನು ಜಿಲ್ಲಾಡಳಿದ ಮೂಲಕ ಗುರುತಿಸಿ ಮೊದಲ ಹಂತದಲ್ಲಿ 5388 ಆಹಾರದ ಕಿಟ್ ವಿತರಿಸಲಾಗಿದೆ. 658 ನಿರಾಶ್ರಿತರಿಗೆ ಶೆಲ್ಟರ್‌ಗಳಲ್ಲಿ ಅಗತ್ಯ ವ್ಯವಸ್ಥೆ ಒದಗಿಸಲಾಗಿದೆ. 2ನೇ ಹಂತದಲ್ಲಿ 5 ಸಾವಿರ ಮಂದಿಗೆ ಜಿಲ್ಲೆಯ ವಿವಿಧ ದೇವಾಲಯಗಳ ಮೂಲಕ ಆಹಾರ ಕಿಟ್ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ತಹಸೀಲ್ದಾರ್‌ಗಳ ಮೂಲಕ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ ಔಷಧಗಳ ದಾಸ್ತಾನು ಇದ್ದು, ಕೊರತೆ ಇಲ್ಲ, ಇನ್ಫೋಸಿಸ್, ಡಾ.ಜಿ.ಶಂಕರ್ ಸೇರಿದಂತೆ ವಿವಿಧ ದಾನಿಗಳ ನೆರವಿನಿಂದ ವೈದ್ಯಕೀಯ ಸಲಕರಣೆಗಳು ಲಭಿಸಿವೆ ಎಂದು ತಿಳಿಸಿದರು.
    ಜಿಲ್ಲಾ ಕರೊನಾ ನೋಡೆಲ್ ಅಧಿಕಾರಿ ಡಾ. ಪ್ರಶಾಂತ್ ಭಟ್ ಮಾಹಿತಿ ನೀಡಿದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಪಂ ಸಿಇಒ ಪ್ರೀತಿ ಗೆಹ್ಲೋಟ್, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts