ಕಾರ್ಪಾಡಿಯಲ್ಲಿ ಕಿರುಷಷ್ಠಿ ಸಂಪನ್ನ

New Project (3)
Published on

ಪುತ್ತೂರು ಗ್ರಾಮಾಂತರ: ಸುಬ್ರಹ್ಮಣ್ಯ ದೇವರು ನಾಗಸ್ವರೂಪಿಯಾಗಿ ಬಂದು ನೆಲೆನಿಂತ ಕ್ಷೇತ್ರ ಐತಿಹಾಸಿಕ ಹಿನ್ನೆಲೆಯಿರುವ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ 4 ದಿನಗಳ ವರ್ಷಾವಧಿ ಜಾತ್ರೆ, ಕಿರುಷಷ್ಠಿ ಮಹೋತ್ಸವ ಕೆಮ್ಮಿಂಜೆ ನಾಗೇಶ ತಂತ್ರಿ ನೇತೃತ್ವದಲ್ಲಿ ನಡೆಯಿತು.

ಸೋಮವಾರ ಬೆಳಗ್ಗೆ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆದು, ಮಧ್ಯಾಹ್ನ ಮಹಾಪೂಜೆಯ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಸಂಜೆಯಿಂದ ಆರಂಭಗೊಂಡು ಕ್ಷೇತ್ರಕ್ಕೆ ಸಂಬಂಧಿಸಿದ ವ್ಯಾಘ್ರ ಚಾಮುಂಡಿ ಮತ್ತು ಮೂಕಾಂಬಿಕಾ ಗುಳಿಗ ದೈವಗಳ ನೇಮೋತ್ಸವ ನಡೆಯುವುದರೊಂದಿಗೆ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು.

ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಕಾರ್ಯಾಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಕಾರ್ಯದರ್ಶಿ ಗಿರೀಶ್ ಕಿನ್ನಿಜಾಲು, ಆಡಳಿತಾಧಿಕಾರಿ ಕೆ.ಟಿ.ಗೋಪಾಲ್, ನಿಕಟಪೂರ್ವ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸುಧಾಕರ್ ರಾವ್ ಆರ್ಯಾಪು ಹಾಗೂ ಸಮಿತಿ ಸದಸ್ಯರು ಸೇರಿದಂತೆ ಸಾವಿರಾರು ಮಂದಿ ಭಕ್ತರು ಜಾತ್ರೋತ್ಸವದಲ್ಲಿ ಪಾಲ್ಗೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net