ಕಾರುಗಳು ಪರಸ್ಪರ ಡಿಕ್ಕಿ, ಪ್ರಯಾಣಿಕರಿಗೆ ಗಾಯ

0 Min Read
ಕಾರುಗಳು ಪರಸ್ಪರ ಡಿಕ್ಕಿ, ಪ್ರಯಾಣಿಕರಿಗೆ ಗಾಯ

ಸುಳ್ಯ: ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದವರು ಗಾಯಗೊಂಡು ಸುಳ್ಯದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಘಟನೆ ದ.ಕ. ಸಂಪಾಜೆ ಗ್ರಾಮದ ಕಡಪಾಲದಲ್ಲಿ ಭಾನುವಾರ ಸಂಭವಿಸಿದೆ. ಮಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಆಲ್ಟೊ ಕಾರು ಹಾಗೂ ಕಲ್ಲುಗುಂಡಿಯಿಂದ ಸುಳ್ಯಕ್ಕೆ ಬರುತ್ತಿದ್ದ ಹೂಂಡೈ ಕಾರು, ಕಡಪಾಲ ಸೇತುವೆ ಬಳಿ ಮುಖಾಮುಖಿ ಡಿಕ್ಕಿ ಹೊಡೆಯಿತು.

ಪರಿಣಾಮವಾಗಿ ಆಲ್ಟೋ ಕಾರಿನಲ್ಲಿದ್ದ ಮಹಿಳೆ, ಇಬ್ಬರು ಮಕ್ಕಳು ಸೇರಿದಂತೆ ಐದು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದರೆ, ಹೂಂಡೈ ಕಾರಿನಲ್ಲಿದ್ದ ಮಗು ಸೇರಿದಂತೆ ಮೂವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗಿದೆ.

See also  ಹೊಟ್ಟೆಗೆ ತಣ್ಣಿರು ಬಟ್ಟೆ ಹಾಕಿಕೊಂಡು ಪ್ರತಿಭಟನೆ
Share This Article