More

    ಧಾರ್ಮಿಕ ಭಾವನೆಗಳಿಗೆ ಧಕ್ಕೆ; ನಟಿ ನಯನತಾರಾ ವಿರುದ್ಧ FIR ದಾಖಲು

    ಭೋಪಾಲ್​: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಉದ್ಘಾಟನೆ ಜನವರಿ 22 ರಂದು ನೆರವೇರಲಿದ್ದು, ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಾಂತರ ಭಕ್ತರು ಕಾತುರದಿಂದ  ಕಾಯುತ್ತಿದ್ದಾರೆ. ಅನ್ನಪೂರ್ಣಿ ಚಿತ್ರದಲ್ಲಿ ಶ್ರೀರಾಮನ ಕುರಿತಾದ ಡೈಲಾಗ್​ ಬಲಪಂಥೀಯ ಸಂಘಟನೆಗಳ ಕೆಂಗಣ್ಣಿಗೆ ಗುಯಾಗಿದ್ದು, ನಟಿ ನಯನತಾರಾ ವಿರುದ್ಧ ಎರಡನೇ ಪ್ರಕರಣ ದಾಖಲಾಗಿದೆ.

    ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಲವ್​ ಜಿಹಾದ್​ಗೆ ಪ್ರೇರೆಪಿಸಿದ್ದಾರೆ ಎಂದು ಆರೋಪಿಸಿ ಚಿತ್ರದ ನಿರ್ಮಾಪಕ, ನಿರ್ದೇಶಕ, ನಯನತಾರಾ ಸೇರಿದಂತೆ ಏಳು ಮಂದಿ ವಿರುದ್ಧ ಮಧ್ಯಪ್ರದೇಶದ ಜಬಲ್​ಪುರದ ಒಮ್ಟಿ ಪೊಲೀಸ್​ ಠಾಣೆಯಲ್ಲಿ FIR ದಾಖಲಾಗಿದೆ.

    ಈ ಕುರಿತು ಪ್ರತಿಕ್ರಿಯಿಸಿರುವ ಹಿಂದೂ ಸೇವಾ ಪರಿಷತ್ತಿನ ಮುಖಂಡರೊಬ್ಬರು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಲವ್​ ಜಿಹಾದ್​ಗೆ ಪ್ರೇರಣೆ ನೀಡಿದ ಆರೋಪದ ಮೇಲೆ ನಟಿ ನಯನತಾರಾ, ನಿರ್ದೇಶಕ ನೀಲೇಶ್ ಕೃಷ್ಣನ್, ನೆಟ್​ಫ್ಲಿಕ್ಸ್​ ಇಂಡಿಯಾದ ಕಂಟೆಂಟ್ ಹೆಡ್ ಮೋನಿಕಾ ಶೆರ್ಗಿಲ್, ಸಿನಿಮಾದ ನಿರ್ಮಾಪಕ ಹೀಗೆ ಒಟ್ಟು ಏಳು ಜನರ ವಿರುದ್ಧ ದೂರು ದಾಖಲಿಸಲಾಗಿದೆ. ಅಗತ್ಯ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಹಿಂದೂ ಸೇವಾ ಪರಿಷತ್ತಿನ ಮುಖಂಡರೊಬ್ಬರು ತಿಳಿಸಿದ್ದಾರೆ.

    ಇದನ್ನೂ ಓದಿ: ಕೋಚಿಮುಲ್​ ನೇಮಕಾತಿ ಹಗರಣದಲ್ಲಿ ಲಂಚ; ಕಾಂಗ್ರೆಸ್​ ಶಾಸಕ ನಂಜೇಗೌಡ ವಿರುದ್ಧ ED ಆರೋಪ

    ಸಿನಿಮಾದ ಬಗ್ಗೆ ವಿವಾದ ಏಳುತ್ತಿದ್ದಂತೆ ನೆಟ್​ಫ್ಲಿಕ್ಸ್ ‘ಅನ್ನಪೂರ್ಣಿ’ ಸಿನಿಮಾವನ್ನು ತನ್ನ ಒಟಿಟಿ ವೇದಿಕೆಯಿಂದ ತೆಗೆದು ಹಾಕಿದೆ. ಜೀ ಸ್ಟುಡಿಯೋ ಹಿಂದೂ ಭಾವನೆಗಳಿಗೆ ಧಕ್ಕೆ ಮಾಡಿದ್ದಕ್ಕಾಗಿ ಕ್ಷಮೆಯಾಚಿಸಿದೆ. ಈ ಸಿನಿಮಾವನ್ನು ಹಿಂದೂ ಹಾಗೂ ಬ್ರಾಹ್ಮಣರ ಭಾವನೆಗಳಿಗೆ ಧಕ್ಕೆ ಮಾಡುವ ಉದ್ದೇಶದಿಂದ ಮಾಡಿಲ್ಲ ಎಂದು ಸ್ಪಷ್ಟಪಡಿಸಿದೆ.

    2023 ಡಿಸೆಂಬರ್​ 01ರಂದು ಅನ್ನಪೂರ್ಣಿ ಚಿತ್ರ ಬಿಡುಗಡೆಯಾಗಿತ್ತು. ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿದ್ದ ಚಿತ್ರವು ಬಳಿಕ ಒಟಿಟಿಯಲ್ಲಿ ಬಿಡುಗಡೆಯಾಗಿತ್ತು. ಇತ್ತೀಚಿಗೆ ಸಿನಿಮಾದಲ್ಲಿನ ದೃಶ್ಯ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು. ವನವಾಸದಲ್ಲಿ ರಾಮ, ಸೀತೆ ಹಾಗೂ ಲಕ್ಷ್ಮಣ ಹಸಿವಾದಾಗ ಪ್ರಾಣಿಗಳನ್ನು ಬೇಟೆ ಆಡಿ ತಿಂದಿದ್ದರು. ರಾಮಾಯಣದಲ್ಲಿ ಈ ಬಗ್ಗೆ ಬರೆಯಲಾಗಿದೆ ಎಂಬ ಡೈಲಾಗ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts