More

    ಭಾರತ ಹಾಕಿ ಆಟಗಾರನ ಮೇಲೆ ಲೈಂಗಿಕ ಕಿರುಕುಳ ಆರೋಪ; ಪ್ರಕರಣ ದಾಖಲು

    ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಆರೋಪ ಹಿನ್ನೆಲೆ ಭಾರತೀಯ ಹಾಕಿ ತಂಡದ ಡಿಫೆಂಡರ್ ಆಗಿರುವ ವರುಣ್ ಕುಮಾರ್ ಅವರ ಮೇಲೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ

    ಕರ್ನಾಟಕದ ಯುವತಿಯೊಬ್ಬರು 2019 ರಲ್ಲಿ ವರುಣ್ ಕುಮಾರ್ ಅವರನ್ನು ಇನ್​ಸ್ಟಾಗ್ರಾಂ ನಲ್ಲಿ ಭೇಟಿಯಾದರು. ಆಗ ಆಕೆಗೆ 17 ವರ್ಷ. ವರುಣ್ ಹಾಕಿ ಪಂದ್ಯಗಳಿಗಾಗಿ ಬೆಂಗಳೂರಿಗೆ ಬಂದಾಗ ವರುಣ್ ಭೇಟಿಯಾಗಿ ಮದುವೆಯಾಗುವುದಾಗಿ ನಂಬಿಸಿ ಸುಳ್ಳು ಹೇಳಿದ್ದ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಆತನ ಮೇಲೆ ಹಲವು ಬಾರಿ ಅತ್ಯಾಚಾರ ನಡೆದಿದೆ ಎಂದು ದೂರಿದ್ದಾಳೆ.

    ಪ್ರತಿಷ್ಠಿತ ಕ್ರೀಡೆಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಯುವತಿಯ ಮೇಲೆ ಭಾರತೀಯ ಹಾಕಿ ತಂಡದ ಡಿಫೆಂಡರ್ ವರುಣ್ ಕುಮಾರ್ ಅತ್ಯಾಚಾರ ನಡೆಸಿದ್ದಾರೆ ಎಂದು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಎಫ್‌ಐಆರ್‌ ದಾಖಲಾಗಿದೆ.

    ಹಾಕಿ ಇಂಡಿಯಾ ಲೀಗ್ ಪಂಜಾಬ್ ವಾರಿಯರ್ ಅನ್ನು ಪ್ರತಿನಿಧಿಸುತ್ತಿರುವ ವರುಣ್ ರಾಷ್ಟ್ರೀಯ ತಂಡದಲ್ಲೂ ಆಡಿದ್ದರು. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚು ಗೆದ್ದ ಭಾರತ ಹಾಕಿ ತಂಡದ ಸದಸ್ಯರಾಗಿದ್ದರು.

    ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕದ ಸಾಧನೆಗೆ ಹಿಮಾಚಲ ಪ್ರದೇಶ ಸರ್ಕಾರ 1 ಕೋಟಿ ರೂ. ನಗದು ಬಹುಮಾನ ಸಹ ಘೋಷಿಸಿತ್ತು.‌ 2021 ನೇ ಸಾಲಿನ ಅರ್ಜುನ ಪ್ರಶಸ್ತಿಗೂ ವರುಣ್ ಕುಮಾರ್ ಭಾಜನರಾಗಿದ್ದರು. ಈಗ ಪ್ರೀತಿ ಪ್ರೇಮದ ಹೆಸರಲ್ಲಿ ನಂಬಿಸಿ ಅತ್ಯಾಚಾರ ಆರೋಪ ಬಂದಿದ್ದು, ವರುಣ್ ಕುಮಾರ್ ವಿರುದ್ಧ ಪೋಕ್ಸೋ, ಅತ್ಯಾಚಾರ ಹಾಗೂ ವಂಚನೆ ಕೇಸ್‌ ಅಡಿ ಎಫ್‌ಐಆರ್‌ ದಾಖಲಾಗಿದೆ. ಜಲಂಧರ್‌ನಲ್ಲಿರುವ ವರುಣ್‌ಗಾಗಿ ಜ್ಞಾನಭಾರತಿ ಪೊಲೀಸರು ಬಲೆ ಬೀಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts