More

    ಹಿಂದುಪರ ಕಾರ್ಯಕರ್ತೆ ಕಾಜಲ್ ಹಿಂದುಸ್ತಾನಿ ವಿರುದ್ಧದ ಪ್ರಕರಣಕ್ಕೆ ತಡೆ

    ಬೆಂಗಳೂರು : ಉಡುಪಿ ‘ದುರ್ಗಾ ದೌಡ್ ’ ಕಾರ್ಯಕ್ರಮದಲ್ಲಿ ಕೋಮು ದ್ವೇಷ ಭಾಷಣ ಹಾಗೂ ಗಲಭೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಹಿಂದುಪರ ಕಾರ್ಯಕರ್ತೆ ಕಾಜಲ್ ಹಿಂದುಸ್ತಾನಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

    ಪ್ರಕರಣ ಸಂಬಂಧ ತಮ್ಮ ವಿರುದ್ಧದ ಪ್ರಾಸಿಕ್ಯೂಷನ್‌ಗೆ ಉಡುಪಿ ಜಿಲ್ಲಾಧಿಕಾರಿ ನೀಡಿರುವ ಪೂರ್ವಾನುಮತಿ ರದ್ದುಪಡಿಸುವಂತೆ ಕೋರಿ ಕಾಜಲ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪಸನ್ನ ಅವರಿದ್ದ ಪೀಠ ಈ ಆದೇಶ ನೀಡಿದೆ.

    ಸಂವಿಧಾನದ 19 ನೇ ವಿಧಿಯ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದನ್ವಯ ಭಾಷಣ ಮಾಡಿದ್ದು, ಯಾವುದೇ ಕೋಮು ದ್ವೇಷಕ್ಕೆ ಎಡೆಮಾಡಿಕೊಟ್ಟಿಲ್ಲ. ದಾಖಲೆಗಳಿಲ್ಲದೆ, ರಾಜಕೀಯ ದುರುದ್ದೇಶದಿಂದ ಪ್ರಕರಣವನ್ನು ದಾಖಲಿಸಲಾಗಿದೆ.

    ಪೂರಕ ಸಾಕ್ಷಾೃಧಾರಗಳ ಕೊರತೆಯಿದ್ದರೂ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಜಿಲ್ಲಾಧಿಕಾರಿಗಳು ಪ್ರಾಸಿಕ್ಯೂಷನ್‌ಗೆ ಪೂರ್ವಾನುಮತಿ ನೀಡಿದ್ದಾರೆ. ಆದ್ದರಿಂದ ಪೂರ್ವಾನುಮತಿಯನ್ನು ರದ್ದುಪಡಿಸಬೇಕು ಎಂದು ಈ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದರು.

    ಪ್ರಕರಣವೇನು?
    2022ರ ಅ. 2 ರಂದು ಉಡುಪಿಯ ಕೃಷ್ಣ ಮಠದ ಸಮೀಪ ನಡೆದ ‘ದುರ್ಗಾ ದೌಡ್ ’ ಕಾರ್ಯಕ್ರಮದಲ್ಲಿ ಹಿಂದು ಜಾಗರಣಾ ವೇದಿಕೆಯ ಅತಿಥಿಯಾಗಿ ಕಾಜಲ್ ಭಾಗವಹಿಸಿದ್ದರು. ಸಣ್ಣ ವಯಸ್ಸಿನ ಹಿಂದು ಹೆಣ್ಣು ಮಕ್ಕಳನ್ನು ಮುಸ್ಲಿಂ ಸಮುದಾಯದವರು ಲವ್ ಜಿಹಾದ್ ನಡೆಸಿ ವಂಚಿಸುತ್ತಿದ್ದಾರೆ. ಜಿಹಾದ್ ಪ್ರಚೋದನೆಯಾಗಿ ಬಾಲಿವುಡ್ ಕಾರ್ಯಚರಿಸುತ್ತಿದೆ ಎಂದಿದ್ದರು. ಹೀಗಾಗಿ ಕಾಜಲ್ ವಿರುದ್ಧ ಪ್ರಕರಣ ದಾಖಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts