ಗಾಂಜಾ ಸೇವನೆ ಮಹಾರಾಷ್ಟ್ರದ ಇಬ್ಬರ ಮೇಲೆ ಪ್ರಕರಣ

ganja arrest
Published on

ಗೋಕರ್ಣ: ಸಾರ್ವಜನಿಕ ಸ್ಥಳದಲ್ಲಿ ಗುರುವಾರ ಬೆಳಗಿನ ಜಾವ ಗಾಂಜಾ ಸೇವಿಸುತ್ತಿದ್ದ ಆರೋಪದ ಮೇರೆಗೆ ಇಬ್ಬರು ಯುವಕರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.

ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ ಕುಡ್ಲೆ ಬೀಚ್ ರಸ್ತೆಯ ಮೇಲೆ ಆರೋಪಿಗಳಾದ ಮಹಾರಾಷ್ಟ್ರದ ನಾಸಿಕ್​ನ ಪ್ರಸಾದ ಸಂಜಯ ಕ್ಷತ್ರಿಯ (24) ಮತ್ತು ನಿಶಾಂತ ಅಶೋಕ ಉಗಾಲೆ (25) ಗಾಂಜಾ ಸೇವಿಸುತ್ತಿರುವುದು ಪತ್ತೆಯಾಗಿದೆ. ಈ ಸಂಬಂಧ ನಡೆಸಲಾದ ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸ್ ವರದಿಯಲ್ಲಿ ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net