ಅಕ್ರಮ ಡಿನೋಟಿಫಿಕೇಷನ್​ ಪ್ರಕರಣ; ಬಿಎಸ್​ವೈಗೆ ಬಿಗ್​ ರಿಲೀಫ್​ ನೀಡಿದ ಹೈಕೋರ್ಟ್​

BSY HC
Published on

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಅಕ್ರಮ ಡಿ ನೋಟಿಫಿಕೇಷನ್​ ಪ್ರಕರಣವನ್ನು ರಾಜ್ಯ ಹೈಕೋರ್ಟ್​ ವಜಾ ಮಾಡಿದೆ.

ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಪ್ರಕರಣವನ್ನು ವಜಾ ಮಾಡಿ ಆದೇಶಿಸಿದೆ. ಈ ಮೂಲಕ ಎಂಟು ವರ್ಷದ ಹಿಂದಿನ ಪ್ರಕರಣದಿಂದ ಬಿಎಸ್​ವೈಗೆ ಮುಕ್ತಿ ದೊರೆತಿದೆ.

BSY
ಸಂಗ್ರಹ ಚಿತ್ರ

ಬಿ.ಎಸ್​. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆ ಹಲಗೇವಡೇರಹಳ್ಳಿ ಮತ್ತು ಬಿಳೇಕಹಳ್ಳಿಯಲ್ಲಿ ಅಕ್ರಮ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಜಯಕುಮಾರ್ ಹಿರೇಮಠ್ 2015ರಲ್ಲಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಈ ಬಗ್ಗೆ ಲೋಕಾಯುಕ್ತ ಸಂಸ್ಥೆಯೂ ತನಿಖೆ ನಡೆಸಿತ್ತು. ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಬಿಎಸ್​ವೈ ಹೈಕೋರ್ಟ್​ ಮೆಟ್ಟಿಲೇರಿದ್ದರು. ಸುಧೀರ್ಘ ಕಾಲ ವಿಚಾರಣೆ ನಡೆಸಿದ ನ್ಯಾಯಾಲಯವು ಪ್ರಕರಣವನ್ನು ವಜಾ ಮಾಡಿ ಮಾಜಿ ಸಿಎಂಗೆ ದೊಡ್ಡ ರಿಲೀರ್ಫ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net