More

    ಶೃಂಗೇರಿಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೇಲೆ 30ಕ್ಕೂ ಹೆಚ್ಚು ಜನರಿಂದ ಸಾಮೂಹಿಕ ಅತ್ಯಾಚಾರ!

    ಚಿಕ್ಕಮಗಳೂರು: ಇಡೀ ದೇಶವೇ ಬೆಚ್ಚಿಬೀಳುವ ದುಷ್ಕೃತ್ಯ ಕರ್ನಾಟಕದಲ್ಲಿ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತಾಯಿಯನ್ನು ಕಳೆದುಕೊಂಡು ದುಃಖದಲ್ಲಿದ್ದ 15ರ ಬಾಲೆ ಮೇಲೆ 30ಕ್ಕೂ ಹೆಚ್ಚು ಮಂದಿ ನಾಲ್ಕೈದು ತಿಂಗಳಿಂದ ಸಾಮೂಹಿಕ ಅತ್ಯಾಚಾರವೆಸಗಿದ್ದು, 15ಕ್ಕೂ ಅಧಿಕ ಆರೋಪಿಗಳ ಗುರುತೇ ಆಕೆಗಿಲ್ಲ.

    ಲೈಂಗಿಕ ದೌರ್ಜನ್ಯವೆಸಗುತ್ತಾ ಆ ಕೃತ್ಯದ ದುಶ್ಯವನ್ನ ವಿಡಿಯೋ ರೆಕಾರ್ಡ್ ಮಾಡಿ ದುಷ್ಕರ್ಮಿಗಳು ಬ್ಲಾಕ್‌ಮೇಲ್ ಮಾಡಿ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿದ್ದಾರೆ. ಇಂತಹ ಹೀನ ಕೃತ್ಯ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಗೋಚವಳ್ಳಿ ಗ್ರಾಮದಲ್ಲಿ ಸಂಭವಿಸಿದೆ.

    ಶೃಂಗೇರಿಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೇಲೆ 30ಕ್ಕೂ ಹೆಚ್ಚು ಜನರಿಂದ ಸಾಮೂಹಿಕ ಅತ್ಯಾಚಾರ!ಶೃಂಗೇರಿಯಲ್ಲಿ ವಾಸವಿದ್ದ ಶಿಗ್ಗಾವಿ ಮೂಲದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೇಲೆ ಗೋಚವಳ್ಳಿ ಗ್ರಾಮದಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಶೃಂಗೇರಿ ಪೊಲೀಸ್​ ಠಾಣೆಯಲ್ಲಿ ನಿನ್ನೆ(ಜ.30) ಎಫ್​ಐಆರ್​ ದಾಖಲಾಗಿದೆ. 15 ವರ್ಷದ ಬಾಲಕಿ ಮೇಲೆ ಕಿಕ್ರೆ ಸ್ಮಾಲ್​ ಅಭಿ ಮತ್ತು ಆತನ ಸ್ನೇಹಿತರಾದ ಗಿರೀಶ್​ ಆನೆಗುಂದ, ಹೊಳೆಕೊಪ್ಪದ ವಿಕಾಶ್​, ಮಣಿಕಂಠ, ಸಂಪತ್​ ನೆಮ್ಮಾರ್, ಶೃಂಗೇರಿಯ ಅಶ್ವತ್​ ಗೌಡ, ಆನೆಗುಂದದ ರಾಜೇಶ್​, ಅಮಿತ್​, ಕುರುಬಗೆರೆಯ ಸಂತೋಷ, ಹೆಗ್ಗದ್ದೆಯ ದೀಕ್ಷಿತ್​, ಹೆರೂರಿನ ಸಂತೋಷ್​, ನಿರಂಜನ್​ ಕಿಗ್ಗ, ಶೃಂಗೇರಿಯ ನಯನಗೌಡ, ಅಭಿಗೌಡ, ಖಾಂಡ್ಯದ ಯೋಗೀಶ್​ ಸೇರಿ 30ಕ್ಕೂ ಹೆಚ್ಚು ಮಂದಿ ನಿರಂತರ ಅತ್ಯಾಚಾರ ನಡೆಸಿ ಲೈಂಕಿಗ ದೌರ್ಜನ್ಯವೆಸಗಿದ್ದಾರೆ. ಈ ದುಷ್ಕೃತ್ಯಕ್ಕೆ ಸಂತ್ರಸ್ತ ಬಾಲಕಿಯ ಚಿಕ್ಕಮ್ಮ ಗೀತಾಳ ಸಹಕಾರವೂ ಇದೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಗೋಚವಳ್ಳಿ ಎಂ.ಜಿ.ಆರ್ ಕ್ರಷರ್ ಮಾಲೀಕನ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ. 2020ರ ಸೆಪ್ಟೆಂಬರ್​ 1ರಿಂದ 2021ರ ಜನವರಿ 27ರವರೆಗೆ ಬಾಲಕಿ ಮೇಲೆ ಕಾಮುಕರು ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಲೈಂಗಿಕ ದೌರ್ಜನ್ಯವೆಸಗಿದ 15ಕ್ಕೂ ಅಧಿಕ ಜನರ ಗುರುತು ಸಂತ್ರಸ್ತೆಗಿಲ್ಲ ಇಲ್ಲ. ಅವರನ್ನೂ ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ.

    ಸಂತ್ರಸ್ತ ಬಾಲಕಿ ಹೇಳಿಕೆ ಆಧಾರಿಸಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಅವರು ಶನಿವಾರ ರಾತ್ರಿ ಶೃಂಗೇರಿ ಸಿಡಿಪಿಒ ಎನ್.ಜಿ.ರಾಘವೇಂದ್ರ ಅವರ ಮೂಲಕ ನೀಡಿದ ದೂರನ್ನು ಆಧರಿಸಿ ಒಟ್ಟು 17 ಆರೋಪಿಗಳ ವಿರುದ್ಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಹೊಸಕೋಟೆಯಲ್ಲಿ ಪ್ರತಿಭಟನೆ, ಲಾಠಿ ಚಾರ್ಜ್: ಶಾಸಕ ಶರತ್ ಬಚ್ಚೇಗೌಡ ವಿರುದ್ಧ ಎಫ್​ಐಆರ್

    ನಿವೃತ್ತ ಉಪನ್ಯಾಸನ ಪತ್ನಿ, ಇಬ್ಬರು ಮಕ್ಕಳು ನಾಲೆಗೆ ಹಾರಿ ಆತ್ಮಹತ್ಯೆ! ಸಾವಿಗೂ ಮುನ್ನ ನಡೆದಿತ್ತು ವಾಕ್ಸಮರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts