More

    ಅನವಶ್ಯಕವಾಗಿ ಸಂಚರಿಸಿದರೆ ಕೇಸ್, ಕೇಂದ್ರ ವಲಯ ಐಜಿಪಿ ಸೀಮಂತ್ ಕುಮಾರ್ ಸಿಂಗ್ ಎಚ್ಚರಿಕೆ, ವಿವಿಧೆಡೆ ಲಾಕ್‌ಡೌನ್ ನಿಯಮ ಪರಿಶೀಲನೆ

    ಸೂಲಿಬೆಲೆ: ಹೊಸಕೋಟೆ ತಾಲೂಕಿನ ರಾಮಸಂದ್ರ ಹಾಗೂ ಚಿಕ್ಕಬಳ್ಳಾಪುರ ಗಡಿಭಾಗವಾದ ತೆನೆಯೂರು ಚೆಕ್ ಪೋಸ್ಟ್ ಹಾಗೂ ಸೂಲಿಬೆಲೆ ಠಾಣಿಗೆ ಕೇಂದ್ರ ವಲಯ ಐಜಿಪಿ ಸೀಮಂತ್ ಕುಮಾರ್ ಸಿಂಗ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್ ಗುರುವಾರ ಭೇಟಿ ನೀಡಿ ಲಾಕ್‌ಡೌನ್ ಜಾರಿಗೊಳಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.

    ಕರೊನಾ ನಿಯಂತ್ರಣದ ದೃಷ್ಟಿಯಿಂದ ಜಾರಿಗೊಳಿಸಿರುವ ಲಾಕ್‌ಡೌನ್‌ಗೆ ಎಲ್ಲರ ಬೆಂಬಲ ಅಗತ್ಯವಿದೆ. ವಿನಾ ಕಾರಣ ರಸ್ತೆಯಲ್ಲಿ ಸಂಚಾರಿಸುವವರವಿರುದ್ಧ ದೂರು ದಾಖಲಿಸಿ ವಾಹನ ವಶಕ್ಕೆ ಪಡೆಯಲು ಸೀಮಂತ್ ಕುಮಾರ್ ಸಿಂಗ್ ಸೂಚಿಸಿದರು.

    ಹೊಸಕೋಟೆ ಡಿವೈಎಸ್‌ಪಿ ಎನ್.ಬಿ.ಸಕ್ರಿ ಮಾತನಾಡಿ, ತಾಲೂಕಿನಲ್ಲಿ ಲಾಕ್‌ಡೌನ್ ಜಾರಿಗೊಳಿಸಲು ಕೈಗೊಂಡಿರುರ ಕ್ರಮಗಳ ಬಗ್ಗ ಮೇಲಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಠಾಣೆಗಳಲ್ಲಿ ನಮ್ಮ ಸಿಬ್ಬಂದಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದರು.

    ಪ್ರತಿ ಠಾಣೆ ವ್ಯಾಪ್ತಿಯಲ್ಲಿಯೂ ಅನಗತ್ಯವಾಗಿ ರಸ್ತೆಗಿಳಿಯುವ ವಾಹನಗಳನ್ನು ಜಪ್ತಿ ಮಾಡಲು ಸೂಚಿಸಲಾಗಿದೆ. ಅವಶ್ಯ ವಸ್ತುಗಳ ಖರೀದಿಗೆ ನಿಗದಿಗೊಳಿಸಿರುವ ಸಮಯದಲ್ಲಿ ಮಾತ್ರ ವಹಿವಾಟು ನಡೆಸಬೇಕು. ಸಾರ್ವಜನಿಕರು ಅನಗತ್ಯವಾಗಿ ಓಡಾಡುವುದನ್ನು ನಿಲ್ಲಿಸಬೇಕು ಎಂದರು.

    ನಂದಗುಡಿ ಸರ್ಕಲ್ ಇನ್‌ಸ್ಪೆಪೆಕ್ಟರ್ ರವೀಂದ್ರ, ಸೂಲಿಬೆಲೆ ಠಾಣೆ ಸಬ್ ಇನ್‌ಸ್ಪೆಕ್ಟರ್ ಮಧುಸೂದನ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts