ಲೈಂಗಿಕ ಹಗರಣ: ಹೈಕೋರ್ಟ್ ಮೆಟ್ಟಿಲೇರಿದ ರೇವಣ್ಣ

ಬೆಂಗಳೂರು: ಮಹಿಳೆ ಮೇಲಿನ ಲೈಂಗಿಕ ಕಿರುಕುಳ, ಅತ್ಯಾಚಾರ ಮತ್ತು ಮನೆಕೆಲಸದಾಕೆಯನ್ನು ಅಪಹರಿಸಿದ ಆರೋಪ ಸಂಬಂಧ ಮೈಸೂರು ಜಿಲ್ಲೆಯ ಕೆ.ಆರ್. ನಗರ ಮತ್ತು ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ರದ್ದುಪಡಿಸಲು ಕೋರಿ ಪ್ರಕರಣದ ಮೊದಲ ಆರೋಪಿಯಾದ ಶಾಸಕ ಎಚ್.ಡಿ. ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಎರಡೂ ಎಫ್‌ಐಆರ್‌ಗಳನ್ನು ರದ್ದುಪಡಿಸಬೇಕು ಎಂದು ಕೋರಿ ರೇವಣ್ಣ ಎರಡು ಪ್ರತ್ಯೇಕ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದಾರೆ. ಮಹಿಳೆಯ ಅಪಹರಣ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿರುವ ಕೆ.ಆರ್.ನಗರ ಠಾಣಾ ಪೊಲೀಸರು (ಸದ್ಯ ತನಿಖೆ ನಡೆಸುತ್ತಿರುವ ಸಿಐಡಿ ಎಸ್‌ಐಟಿ ಅಧಿಕಾರಿಗಳು) ಮತ್ತು ದೂರುದಾರ ಎಚ್.ಡಿ. ರಾಜು ಅವರನ್ನು ಪ್ರತಿವಾದಿ ಮಾಡಿದ್ದಾರೆ. ಹಾಗೆಯೇ, ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿರುವ ಹೊಳೆನರಸೀಪುರ ಠಾಣೆಯ ಪೊಲೀಸರು (ಸದ್ಯ ತನಿಖೆ ನಡೆಸುತ್ತಿರುವ ಸಿಐಡಿ ಎಸ್‌ಐಟಿ ಅಧಿಕಾರಿಗಳು) ಮತ್ತು ದೂರುದಾರ ಮಹಿಳೆಯನ್ನು ಪ್ರತಿವಾದಿ ಮಾಡಿದ್ದಾರೆ.

ಜಾಮೀನು ರದ್ದತಿಗೆ ಎಸ್‌ಐಟಿ ಅರ್ಜಿ:
ಇನ್ನೊಂದೆಡೆ ಮಹಿಳೆ ಅಪಹರಣ ಆರೋಪ ಸಂಬಂಧ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಎಚ್.ಡಿ. ರೇವಣ್ಣ ಅವರಿಗೆ ಜಾಮೀನು ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು (ಸೆಷನ್ಸ್ ಕೋರ್ಟ್) ಮೇ 13ರಂದು ಹೊರಡಿಸಿದ ತೀರ್ಪು ರದ್ದುಪಡಿಸಬೇಕು ಎಂದು ಕೋರಿ ಎಸ್‌ಐಟಿ ಅಧಿಕಾರಿಗಳು ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದಾರೆ.

ಅಪ್ರಹರಣ ಪ್ರಕರಣವು ಗಂಭೀರ ಸ್ವರೂಪದಾಗಿದ್ದು, ರೇವಣ್ಣ ಪ್ರಮುಖ ಪಾತ್ರ ವಹಿಸಿದ್ದಾರೆ. ಪ್ರಕರಣ ಇನ್ನೂ ತನಿಖಾ ಹಂತದಲ್ಲಿದೆ. ಆರೋಪಿಗಳ ಹಾಗೂ ಸಾಕ್ಷಿಗಳ ಬಗೆಗೆ ಹೆಚ್ಚಿನ ಮಾಹಿತಿ ಕಲೆಹಾಕಬೇಕಾಗಿದೆ. ಆರೋಪಿಗೆ ಜಾಮೀನು ಲಭ್ಯವಾಗಿರುವುದರಿಂದ ತನಿಖೆ ಮೇಲೆ ಪ್ರಭಾವ ಬೀರಬಹುದು. ಹಾಗಾಗಿ, ರೇವಣ್ಣ ಅವರಿಗೆ ನೀಡಲಾಗಿರುವ ಜಾಮೀನು ಅನ್ನು ರದ್ದುಪಡಿಸಬೇಕು ಎಂದು ಎಸ್‌ಐಟಿ ಪೊಲೀಸರು ಕೋರಿದ್ದಾರೆ. ಈ ಎಲ್ಲ ಅರ್ಜಿಗಳು ಶೀಘ್ರ ವಿಚಾರಣೆಗೆ ಬರುವ ಸಾಧ್ಯತೆಯಿದೆ.

Share This Article

ತೂಕ ಇಳಿಸಿಕೊಳ್ಳಬೇಕಾ? ಸುಮ್ಮನೆ ಈ ಹಣ್ಣು, ಸೊಪ್ಪಿನ ವಾಸನೆಯನ್ನು ಒಮ್ಮೆ ಉಸಿರಾಡಿದ್ರೆ ಸಾಕು

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…

ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿದು ನೋಡಿ; ಆರೋಗ್ಯ ಸಮಸ್ಯೆಗೆ ಸಿಗುತ್ತೆ ಪರಿಹಾರ …

 ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…

ಬಿಕ್ಕಳಿಕೆ ಏಕೆ ಬರುತ್ತದೆ? ಕಿರಿಕಿರಿ ಉಂಟುಮಾಡುವ ಅದನ್ನು ನಿಯಂತ್ರಿಸುವುದು ಹೇಗೆ?

 ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…