

ಕರಾಚಿ: ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಮ್ ಸಂಕಷ್ಟದ ಸುಳಿಗೆ ಸಿಲುಕಿದ್ದಾರೆ. ಲೈಂಗಿಕ ಕಿರುಕುಳ ಆರೋಪದ ಮೇರೆಗೆ ಲಾಹೋರ್ ಕೋರ್ಟ್ ಪಾಕ್ ನಾಯಕನ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಆದೇಶಿಸಿದೆ. ಲಾಹೋರ್ ಮೂಲದ ಹಮೀಜಾ ಮುಖ್ತಾರ್, ಬಾಬರ್ ಅಜಮ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ ಮಹಿಳೆ. ಬಾಬರ್ ಅಜಮ್ ಮದುವೆಯಾಗುವುದಾಗಿ ನಂಬಿಸಿ, ಲೈಂಗಿಕವಾಗಿ ಬಳಸಿಕೊಂಡು ಬಳಿಕ ಗರ್ಭಪಾತ ಮಾಡಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ವೈದ್ಯಕೀಯ ದಾಖಲೆಗಳನ್ನು ಕೋರ್ಟ್‌ಗೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: ದೇವದತ್ ಪಡಿಕಲ್ ಅಜೇಯ 99ರನ್, ಕರ್ನಾಟಕ ತಂಡಕ್ಕೆ 2ನೇ ಜಯ
ಎರಡು ಕಡೆಯ ವಾದ ಆಲಿಸಿದ ನ್ಯಾಯಮೂರ್ತಿ ನೊಮನ್ ಮೊಹಮದ್ ನೀಮ್, ಬಾಬರ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಸೂಚಿಸಿದ್ದಾರೆ. ಜತೆಗೆ ಸೂಕ್ತ ತನಿಖೆ ನಡೆಸುವಂತೆಯೂ ಆದೇಶಿಸಿದ್ದಾರೆ. ಲಾಹೋರ್‌ನ ನಸೀರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹಮೀಜಾ ಹೇಳಿದ್ದಾರೆ. ಕೇಸು ವಾಪಸ್ ಪಡೆಯುವಂತೆ ಬಾಬರ್ ಅಜಮ್ ಕಡೆಯಿಂದ ತೀವ್ರವಾದ ಒತ್ತಡ ಬರುತ್ತಿದ್ದು ಎಂದು ಹಮೀಜಾ ದೂರಿದ್ದಾರೆ. ಜತೆಗೆ ಮಹಿಳೆ ಸುಳ್ಳು ಹೇಳುತ್ತಿದ್ದಾಳೆ ಎಂದು ಬಾಬರ್ ಪರ ವಕೀಲರು ಆರೋಪಿಸಿದ್ದಾರೆ.
ಇದನ್ನೂ ಓದಿ: ಭಾರತದ ಷಟ್ಲರ್ ಸೈನಾ ನೆಹ್ವಾಲ್‌ಗೆ ನಿರಾಸೆ
ಗಾಯದ ಸಮಸ್ಯೆಯಿಂದಾಗಿ ಇತ್ತೀಚೆಗೆ ನ್ಯೂಜಿಲೆಂಡ್ ಪ್ರವಾಸದಿಂದ ಬಾಬರ್ ಅಜಮ್ ಹಿಂದೆ ಸರಿದಿದ್ದರು. ಸದ್ಯ ಪಾಕಿಸ್ತಾನ ತಂಡ ತವರಿನಲ್ಲಿ ನಡೆಯಲಿರುವ ಟೆಸ್ಟ್ ಹಾಗೂ ಟಿ20 ಸರಣಿಗೆ ಸಜ್ಜಾಗುತ್ತಿದೆ.