28.5 C
Bengaluru
Monday, January 20, 2020

ಪಂಜಾಬ್​ ಸಿಎಂ ಮನಗೆಲ್ಲಲು ಪಾಕಿಸ್ತಾನದಿಂದ ಕಾಡು ಕವುಜಗದ ಪ್ರತಿಕೃತಿ ತಂದುಕೊಟ್ಟ ಸಿಧುಗೆ ಸಂಕಷ್ಟ!

Latest News

ವಿಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಲಿ: ಜಿ. ಪರಮೇಶ್ವರ್

ಬೆಂಗಳೂರು: ವಿಪಕ್ಷ ನಾಯಕ ಸ್ಥಾನ ಮತ್ತು ಕಾಂಗ್ರಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಿರಲಿ ಎಂಬ ಅಭಿಪ್ರಾಯವನ್ನು ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಗುರುತು ಪತ್ತೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಚಿತ್ರ ಸಿಸಿಟಿವಿಯಲ್ಲಿ ಸೆರೆಯಾಗಿದೆ.ವಿಮಾನ ನಿಲ್ದಾಣದಲ್ಲಿರುವ ಸಿಸಿಟಿವಿಯಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಪತ್ತೆಯಾಗಿದೆ.ಶಂಕಿತ...

ವಸತಿ ಸಹಾಯಧನ ಹೆಚ್ಚಳ ಕೋರಿ ಪ್ರಧಾನಿ ಬಳಿ ರಾಜ್ಯದ ನಿಯೋಗ : ವಸತಿ ಸಚಿವ ವಿ.ಸೋಮಣ್ಣ

ಬೆಂಗಳೂರು: ವಿಧಾನ ಸೌಧ ಕೊಠಡಿಯಲ್ಲಿ ಬೆಂಗಳೂರು ನಗರ ವಸತಿ ಯೋಜನೆ ಕುರಿತು ಸಂಸದ, ಶಾಸಕರ ಸಭೆಯಲ್ಲಿ ಸೋಮವಾರ ಈ ವಿಷಯ ತಿಳಿಸಿದರು.ಕೇಂದ್ರ ಸಹಾಯಧನ...

ಜೂಜುಕೋರರ ಗಡಿಪಾರು ಖಚಿತ: ಎಸ್‌ಪಿ ವಂಶಿಕೃಷ್ಣ ಎಚ್ಚರಿಕೆ

ಪಾವಗಡ: ಮಟ್ಕಾ ಮತ್ತು ಇಸ್ಪೀಟು ಆಡುವವರನ್ನು ಮತ್ತು ಆಡಿಸುವವರನ್ನು ಗಡಿಪಾರು ವಾಡಲು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಎಸ್‌ಪಿ ಡಾ.ಕೆ.ವಂಶಿಕೃಷ್ಣ...

ವಿಶ್ವಶಾಂತಿಗೆ ಸಂತರ ಮಾರ್ಗದರ್ಶನ ಅಗತ್ಯ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ತುಮಕೂರು: ವಿಶ್ವವೇ ಸಂಕಷ್ಟದ ಸನ್ನಿವೇಶದಲ್ಲಿದ್ದು ಜನರ ಭಯ ತೊಲಗಿಸಲು ಸುಖ-ಶಾಂತಿ ನೆಲೆಸಲು ಸಂತರ ಮಾರ್ಗದರ್ಶನ ಅಗತ್ಯವಿದೆ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ...

ಅಮೃತಸರ: ಪಂಜಾಬ್​ನ ಸಿಎಂ, ಕ್ಯಾಪ್ಟನ್​ ಅಮರಿಂದರ್​ ಸಿಂಗ್​ ಮತ್ತು ತಮ್ಮ ನಡುವೆ ಏರ್ಪಟ್ಟಿದ್ದ ಮುನಿಸು ಶಮನ ಮಾಡಿಕೊಳ್ಳಲು ಬಯಸಿದ್ದ ಸಚಿವ ನವಜೋತ್​ ಸಿಂಗ್​, ಮುಖ್ಯಮಂತ್ರಿಯನ್ನು ಕಾಣಲು ತೆರಳುವಾಗ ಪಾಕಿಸ್ತಾನದಿಂದ ಖರೀದಿಸಿ ತಂದಿದ್ದ ಕಪ್ಪು ಕಾಡು ಕವುಜಗದ ಪ್ರತಿಕೃತಿಯನ್ನು ಕೊಂಡೊಯ್ದಿದ್ದರು. ಆದರೆ, ಅದೇ ಅವರಿಗೆ ಸಂಕಷ್ಟ ತಂದೊಡ್ಡುವ ಸಾಧ್ಯತೆಗಳಿವೆ.

ಕಾಡು ಕೌಜುಗದ ಅಂಗಾಂಗಗಳಿಂದ ಮಾಡಿದ, ಜೀವಂತ ಕೌಜುಗವನ್ನೇ ಹೋಲುವ ಆ ಪ್ರತಿಕೃತಿಯನ್ನು ಅನುಮತಿ ಇಲ್ಲದೇ ಭಾರತಕ್ಕೆ ತಂದ ಬಗ್ಗೆ ಅದನ್ನು ತಮ್ಮ ಬಳಿ ಸಂಗ್ರಹಿಸಿಟ್ಟುಕೊಂಡಿದ್ದರ ಬಗ್ಗೆ ವನ್ಯಜೀವಿ ಕಾರ್ಯಕರ್ತ ಸಂದೀಪ್​ ಜೈನ್​ ಎಂಬುವವರು ವನ್ಯಜೀವಿ ಕಾಯ್ದೆ 1972ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

” ಸಚಿವ ನವಜೋತ್​ ಸಿಂಗ್​ ಸಿಧು ಅವರು ಕವುಜಗದ ಪ್ರತಿಕೃತಿಯನ್ನು ಪಾಕಿಸ್ತಾನದಿಂದ ಖರೀದಿಸಿ ತಂದು ಪಂಜಾಬ್​ ಮುಖ್ಯಮಂತ್ರಿ ಅಮರಿಂದರ್​ ಸಿಂಗ್​ ಅವರಿಗೆ ನೀಡಿರುವ ಬಗ್ಗೆ ನಾನು ಪತ್ರಿಕೆಗಳಲ್ಲಿ ಓದಿ ಮಾಹಿತಿ ಪಡೆದುಕೊಂಡೆ. ಆದರೆ, ಇದು ವನ್ಯಜೀವಿ ಕಾಯ್ದೆ 1972ರ ಪ್ರಕಾರ ಅಪರಾಧ. ಈ ಬಗ್ಗೆ ನಾನು ವನ್ಯಜೀವಿ ಅಪರಾಧ ನಿಯಂತ್ರಣ ವಿಭಾಗದಲ್ಲಿ ಪ್ರಕರಣ ದಾಖಲಿಸಿದ್ದೇನೆ. ಕಪ್ಪು ಕಾಡು ಕವುಜಗದ ಪ್ರತಿಕೃತಿಯನ್ನು ಭಾರತಕ್ಕೆ ತಂದಿದ್ದು ಹೇಗೆ, ಅದನ್ನು ಪಂಜಾಬ್​ನಲ್ಲಿ ದೀರ್ಘಕಾಲ ಸಂಗ್ರಹಿಸಿಟ್ಟಿದ್ದು ಹೇಗೇ ಎಂಬುದರ ಬಗ್ಗೆ ತನಿಖೆ ನಡೆಸುವಂತೆ ಕೋರಿದ್ದೇನೆ. 1972 ವನ್ಯಜೀವಿ ಕಾಯ್ದೆಯ ಪ್ರಕಾರ ವನ್ಯಜೀವಿಗಳನ್ನು ಅಕ್ರಮವಾಗಿ ಬಂಧಿಸಿಡುವುದು, ಅವುಗಳ ಅಂಗಾಂಗಗಳನ್ನು ಸಂಗ್ರಹಿಸಿಡುವುದು ಅಪರಾಧ,” ಎಂದು ಅವರು ಆರೋಪಿಸಿದ್ದಾರೆ.

ಪಂಜಾಬ್​ನ ಸಿಎಂ ಅಮರೀಂದರ್​ ಸಿಂಗ್​ ಮತ್ತು ಸಚಿವ ನವಜೋತ್​ ಸಿಂಗ್​ ಸಿಧು ಅವರ ನಡುವೆ ಸರ್ಕಾರದ ಮಟ್ಟದಲ್ಲಿ ಮುಸುಕಿನ ಗುದ್ದಾಟ ನಡೆಯುತ್ತಿದೆ. ಇದು ಮಾಧ್ಯಮಗಳಲ್ಲೂ ವರದಿಯಾಗಿದೆ. ಈ ನಡುವೆ ಪಂಜಾಬ್​ನಲ್ಲಿ ಅಮರೀಂದರ್​ ಸಿಂಗ್​ ಅವರೇ ಅಂತಿಮ ಎಂಬ ಸಂದೇಶವನ್ನು ಕಾಂಗ್ರೆಸ್​ ಹೈಕಮಾಂಡ್​ ಸಿಧುಗೆ ನೀಡಿದೆ. ಇದೇ ಹಿನ್ನೆಲೆಯಲ್ಲಿ ತಮ್ಮ ನಡುವಿನ ಭಿನ್ನಾಭಿಪ್ರಾಯ ಬಗೆಹರಿಸಿಕೊಳ್ಳುವ ಭಾಗವಾಗಿ ಸಿಧು ಮುಖ್ಯಮಂತ್ರಿಯನ್ನು ಸೌಹಾರ್ದವಾಗಿ ಭೇಟಿಯಾಗಿದ್ದರು. ಆಗ ಕಪ್ಪು ಬಣ್ಣದ ಕಾಡು ಕವುಜಗದ ಪ್ರತಿಕೃತಿಯನ್ನು ಸಿಧು ಮುಖ್ಯಮಂತ್ರಿಗೆ ಉಡುಗೊರೆಯಾಗಿ ನೀಡಿದ್ದರು.

ವಿಡಿಯೋ ನ್ಯೂಸ್

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...