More

    ಕೆಎಲ್​ಎಸ್ ವಿಡಿಐಟಿಗೆ ನಗದು ಪುರಸ್ಕಾರ

    ಹಳಿಯಾಳ: ಕ್ರೀಡಾ ಹಾಗೂ ಸಾಂಸ್ಕೃತಿಕ ವಿಭಾಗದಲ್ಲಿ ಹಳಿಯಾಳದ ಕೆಎಲ್​ಎಸ್ ವಿಡಿಐಟಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು 2020-21ರಲ್ಲಿ ತೋರಿರುವ ಸಾಧನೆಯನ್ನು ಗುರುತಿಸಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿಯು 1 ಲಕ್ಷ ರೂ. ನಗದು ಪುರಸ್ಕಾರ ನೀಡಿ ಗೌರವಿಸಿದೆ ಎಂದು ಪ್ರಾಚಾರ್ಯ ಡಾ. ವಿ. ಎ. ಕುಲಕರ್ಣಿ ತಿಳಿಸಿದ್ದಾರೆ.

    ಈ ಕುರಿತು ಪ್ರಕಟಣೆ ನೀಡಿರುವ ಅವರು, ದಶಕಗಳಿಂದ ವಿಶ್ವವಿದ್ಯಾಲಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ತೋರಿರುವ ಗಣನೀಯ ಸಾಧನೆಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಈ ಪುರಸ್ಕಾರವನ್ನು ನೀಡಿದೆ ಎಂದು ತಿಳಿಸಿದ್ದಾರೆ.

    ಮಹಿಳಾ ವಿಭಾಗದ ಕುಸ್ತಿಯಲ್ಲಿ ಅಪ್ರತಿಮ ಸಾಧನೆ ತೋರಿರುವ ವಿದ್ಯಾರ್ಥಿನಿ ಭುವನೇಶ್ವರಿಗೆ ವಿಶ್ವವಿದ್ಯಾಲಯವು ವಿದ್ಯಾರ್ಥಿ ವೇತನ ನೀಡಿ ಪುರಸ್ಕರಿಸಿದೆ ಎಂದಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts