More

    ಜಾತಿ ಗಣತಿ ವರದಿ, ಕಾನೂನು ಸಲಹೆಗೆ ಮೊರೆ; ಸ್ವಾಮೀಜಿಗಳಿಂದ ವರದಿ ಸ್ವೀಕಾರಕ್ಕೆ ಒತ್ತಾಯ

    ಬೆಂಗಳೂರು: ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿರುವ ಜಾತಿ ಗಣತಿ ಕುರಿತು ಮಹತ್ವದ ಮಾಹಿತಿಯೊಂದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಗೆಡಹಿದ್ದಾರೆ.
    ಜಾತಿ ಗಣತಿ ವರದಿ ನೀಡಲು ಎರಡು ತಿಂಗಳು ಅವಧಿ ವಿಸ್ತರಣೆಯಾಗಿದೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಕಾಂತರಾಜು ವರದಿಯನ್ನೇ ಕೊಡಲು ಸಾಧ್ಯವಿಲ್ಲ ಎಂದಿದ್ದು, ಈ ಬಗ್ಗೆ ಕಾನೂನು ಸಲಹೆ ಪಡೆದು ಮುಂದುವರೆಯಲಾಗುವುದು ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
    ಶನಿವಾರ ಸಿಎಂ ಗೃಹ ಕಚೇರಿಗೆ ಆಗಮಿಸಿದ್ದ ಹಿಂದುಳಿದ ಸಮುದಾಯಗಳ ಮಠಾಧೀಶರು ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು. ಈ ವೇಳೆ ಜಾತಿ ಗಣತಿ ಕುರಿತ ಈ ಸಂಗತಿಯನ್ನು ತಿಳಿಸಿದರು.
    ಇದೇ ಸಂದರ್ಭದಲ್ಲಿ ಮಠಗಳಿಗೆ ಜಮೀನು ಕೊಡುವ ಬಗ್ಗೆ ಸ್ವಾಮೀಜಿಗಳು ಪ್ರಸ್ತಾಪಿಸಿದರು. ತಹಸೀಲ್ದಾರ್‌ಗೆ ಬಗ್ಗೆ ವರದಿ ನೀಡಲು ಸೂಚಿಸಿದ್ದು, ವರದಿಯನ್ನು ಶೀಘ್ರವಾಗಿ ನೀಡುವಂತೆ ಸಿಎಂ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗೆ ದೂರವಾಣಿ ಮೂಲಕ ಮಾತನಾಡಿ ಸೂಚನೆ ನೀಡಿದರು.
    ಈ ವೇಳೆ ಶ್ರಮಿಕ ವರ್ಗದವರಿಗೆ ಗ್ಯಾರಂಟಿಗಳು ಹೆಚ್ಚು ಉಪಯುಕ್ತ ವಾಗಿವೆ ಎಂದು ಸ್ವಾಮೀಜಿಗಳು ಅಭಿಪ್ರಾಯಪಟ್ಟರು.
    ಭೋವಿ ಸಮುದಾಯ ಚಿತ್ರದುರ್ಗದ ಸಿದ್ದರಾಮೇಶ್ವರ ಸ್ವಾಮೀಜಿ, ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ, ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಶ್ರೀನಿರಂಜನಾನಂದಪುರಿ ಹಾಗೂ ವಿವಿಧ ಹಿಂದುಳಿದ ಜಾತಿಗಳ ಮಠಗಳ ಸ್ವಾಮೀಜಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಕೆ.ಎ. ದಯಾನಂದ ಉಪ ಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts