ರಾಜಸ್ಥಾನ ರಾಯಲ್ಸ್ ತಂಡ ಐಪಿಎಲ್ ಫೈನಲ್ ತಲುಪಲು ವಿಫಲವಾದ ಹೊರತಾಗಿಯೂ, ವೈಭವ್ ಸೂರ್ಯವಂಶಿ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದ ವೇಳೆ ಉಪಸ್ಥಿತರಿದ್ದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಎರಡನೇ ಬಾರಿಗೆ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ನಂತರ, ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸೂರ್ಯವಂಶಿ ಅವರನ್ನು ವೇದಿಕೆಗೆ ಆಹ್ವಾನಿಸಿ, ಈ ಸೀಸನ್‌ನ ಅತ್ಯಂತ ಅಮೂಲ್ಯ ಆಟಗಾರ (ಮೋಸ್ಟ್ ವ್ಯಾಲ್ಯೂಯೆಬಲ್ ಪ್ಲೇಯರ್) ಪ್ರಶಸ್ತಿ ನೀಡಿ ಗೌರವಿಸಲಾಯಿತು.