ನಿನ್ನೆ (ಏಪ್ರಿಲ್ 13) ಹೈದರಾಬಾದ್ನ ಉಪ್ಪಲ್ ಕ್ರೀಡಾಂಗಣದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವೆ ಐಪಿಎಲ್ನ 21ನೇ ಪಂದ್ಯದ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಎಸ್ಆರ್ಎಚ್, ನಾಯಕ ಇಶಾನ್ ಕಿಶನ್ ( 91 ರನ್, 44 ಎಸೆತ, 8 ಬೌಂಡರಿ, 6 ಸಿಕ್ಸರ್) ಅವರ ಬಿರುಸಿನ ಬ್ಯಾಟಿಂಗ್ ಹಾಗೂ ಹೆನ್ರಿಕ್ ಕ್ಲಾಸೆನ್ (40) ಅವರ ಉಪಯುಕ್ತ ರನ್ ಕಾಣಿಕೆಯ ನೆರವಿನಿಂದ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 216 ರನ್ ಕಲೆ ಹಾಕಿತು. ಆರ್ಆರ್ ಪರ ಜೋಫ್ರ ಆರ್ಚರ್ 2 ವಿಕೆಟ್ ಪಡೆದರೆ, ಸಂದೀಪ್ ಶರ್ಮಾ, ತುಷಾರ್ ದೇಶಪಾಂಡೆ ಹಾಗೂ ರಿಯಾನ್ ಪರಾಗ್ ತಲಾ ಒಂದೊಂದು ವಿಕೆಟ್ ಪಡೆದರು.