ಕ್ವಾಲಿಫೈಯರ್-1 ಪಂದ್ಯಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸಂಭಾವ್ಯ ಅಂತಿಮ ಪ್ಲೇಯಿಂಗ್ ಇಲೆವೆನ್ ಹೀಗಿರಬಹುದು ಎಂದು ಅಂದಾಜಿಸಲಾಗಿದೆ: ನಾಯಕ ರಜತ್ ಪಾಟೀದಾರ್ ಅವರೊಂದಿಗೆ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್ ಅಥವಾ ವೆಂಕಟೇಶ್ ಅಯ್ಯರ್ (ಪಿಚ್ ಪರಿಸ್ಥಿತಿಗೆ ತಕ್ಕಂತೆ ಇವರಿಬ್ಬರಲ್ಲಿ ಒಬ್ಬರು ಓಪನರ್ ಆಗಿ ಕಣಕ್ಕಿಳಿಯುವ ಸಾಧ್ಯತೆ ಇದೆ), ದೇವದತ್ ಪಡಿಕ್ಕಲ್, ಜಿತೇಶ್ ಶರ್ಮಾ, ರೊಮಾರಿಯೋ ಶೆಫರ್ಡ್, ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್ವುಡ್ ಮತ್ತು ರಸಿಖ್ ಸಲಾಮ್ ದಾರ್. ಈ ಬಲಿಷ್ಠ ಲೈನ್-ಅಪ್ ನೋಡಿದರೆ ಆರ್ಸಿಬಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಸಮತೋಲನ ಕಾಯ್ದುಕೊಂಡು ಗುಜರಾತ್ ಟೈಟಾನ್ಸ್ ವಿರುದ್ಧ ಮಹತ್ವದ ಜಯ ಸಾಧಿಸಲು ಸಕಲ ಸಿದ್ಧತೆ ಮಾಡಿಕೊಂಡಿರುವುದು ಸ್ಪಷ್ಟವಾಗಿ ತಿಳಿಯುತ್ತದೆ, (ಏಜೆನ್ಸೀಸ್).