ಅಂತಾರಾಷ್ಟ್ರೀಯ ಮಟ್ಟದಲ್ಲೂ ಮಿಂಚಿರುವ ಸೂರ್ಯವಂಶಿ, ಈ ವರ್ಷ ನಡೆದ ಅಂಡರ್-19 ವಿಶ್ವಕಪ್‌ನಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರನಾಗಿ ಹೊರಹೊಮ್ಮಿದ್ದಾರೆ. ಟೂರ್ನಿಯಲ್ಲಿ 439 ರನ್ ಗಳಿಸುವುದರ ಜೊತೆಗೆ, ಬರೋಬ್ಬರಿ 30 ಸಿಕ್ಸರ್‌ಗಳನ್ನು ಸಿಡಿಸುವ ಮೂಲಕ ಡೆವಾಲ್ಡ್ ಬ್ರೆವಿಸ್ ಅವರ ದಾಖಲೆಯನ್ನು ಮುರಿದು ವಿಶ್ವಕಪ್ ಇತಿಹಾಸದಲ್ಲೇ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಅಂಡರ್-19 ಏಕದಿನ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ರನ್ (1,412) ಗಳಿಸಿದ ದಾಖಲೆ ಹೊಂದಿರುವ ಇವರು, ಆಸ್ಟ್ರೇಲಿಯಾ ವಿರುದ್ಧ ಕೇವಲ 58 ಎಸೆತಗಳಲ್ಲಿ ಶತಕ ಸಿಡಿಸಿ ಯೂತ್ ಟೆಸ್ಟ್‌ನಲ್ಲಿ ಅತಿ ವೇಗದ ಶತಕ ಬಾರಿಸಿದ ಭಾರತೀಯ ಎಂಬ ಖ್ಯಾತಿಗೂ ಭಾಜನರಾಗಿದ್ದಾರೆ, (ಏಜೆನ್ಸೀಸ್).