Salman Khan: ಬಾಲಿವುಡ್ ನಟ ಸಲ್ಮಾನ್ ಖಾನ್, ತಮ್ಮ ವ್ಯಕ್ತಿತ್ವದ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ, ಮುಂಬರುವ ಕಾಲಾ ಹಿರನ್ ಚಿತ್ರದ ಬಿಡುಗಡೆಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಸೋಮವಾರ ನಡೆಸಿತು. ಚಿತ್ರದ ನಿರ್ಮಾಪಕರು ಅನುಮತಿಯಿಲ್ಲದೆ, ತಮ್ಮ ಪಬ್ಲಿಕ್ ಐಡೆಂಟಿಟಿ ಮತ್ತು ವ್ಯಕ್ತಿತ್ವವನ್ನು ಪ್ರಚಾರಕ್ಕಾಗಿ ಬಳಸಿಕೊಂಡಿದ್ದಾರೆ ಎಂದು ಖಾನ್ ಆರೋಪಿಸಿದ್ದು, ನ್ಯಾಯಾಲಯವು ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 7ಕ್ಕೆ ನಿಗದಿಪಡಿಸಿದೆ.