ಈ ಬೆಳವಣಿಗೆಗಳ ಬೆನ್ನಲ್ಲೇ, 2026ರ ಫೆಬ್ರವರಿಯಲ್ಲಿ ವಿಜಯ್ ಅವರ ಪತ್ನಿ ಸಂಗೀತಾ ಅವರು ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿರುವುದು ದೊಡ್ಡ ಮಟ್ಟದ ಸಂಚಲನ ಮೂಡಿಸಿದೆ. ವಿಜಯ್ ಅವರಿಗೆ ಮತ್ತೊಬ್ಬ ನಟಿಯ ಜೊತೆ ಸಂಬಂಧವಿದೆ ಎಂಬ ಕಾರಣ ನೀಡಿ ಈ ಅರ್ಜಿ ಸಲ್ಲಿಕೆಯಾಗಿದ್ದು, ಅರ್ಜಿಯಲ್ಲಿ ಆ ನಟಿಯ ಹೆಸರನ್ನು ಉಲ್ಲೇಖಿಸಲಾಗಿಲ್ಲ. ಆದರೂ, ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಸಾರ್ವಜನಿಕ ವಲಯದಲ್ಲಿ ಆ ನಟಿ ತ್ರಿಷಾ ಇರಬಹುದು ಎಂಬ ಊಹಾಪೋಹಗಳು ದಟ್ಟವಾಗಿ ಹರಡುತ್ತಿವೆ, (ಏಜೆನ್ಸೀಸ್).