ಬಿಬಿಸಿ ಏಷ್ಯನ್‌ನ ಯೂಟ್ಯೂಬ್ ಚಾನೆಲ್ನಲ್ಲಿ ಹರುನ್ ರಷೀದ್ ಅವರಿಗೆ ರೆಹಮಾನ್ ಸಂದರ್ಶನ ನೀಡಿದ್ದಾರೆ. ರಾಮಾಯಣ ಸಿನಿಮಾಗೆ ಸಂಗೀತ ನೀಡುವಲ್ಲಿ ನಿಮ್ಮ ಧಾರ್ಮಿಕ ನಂಬಿಕೆಗಳು ಪಾತ್ರ ವಹಿಸಿವೆಯೇ ಎಂದು ರೆಹಮಾನ್ ಅವರನ್ನು ಈ ವೇಳೆ ಪ್ರಶ್ನಿಸಲಾಯಿತು. ಇದಕ್ಕೆ ಉತ್ತರ ನೀಡಿದ ರೆಹಮಾನ್, ನಾನು ಬ್ರಾಹ್ಮಣ ಶಾಲೆಯಲ್ಲಿ ಓದಿದ್ದೇನೆ. ರಾಮಾಯಣ ಮತ್ತು ಮಹಾಭಾರತದ ಕತೆಗಳನ್ನು ಪ್ರತಿ ವರ್ಷ ಹೇಳಿಕೊಡಲಾಗುತ್ತಿತ್ತು. ಆದ್ದರಿಂದ, ನನಗೆ ಕತೆಗಳು ಚೆನ್ನಾಗಿ ತಿಳಿದಿವೆ. ಈ ಕತೆಗಳು ಮಾನವ ದಯೆ, ಉನ್ನತ ಆದರ್ಶಗಳು ಮತ್ತು ಎಲ್ಲದರ ಬಗ್ಗೆ ತಿಳಿಸುತ್ತದೆ. ಜನರು ಏನೇ ವಾದಿಸಬಹುದು ಆದರೆ, ನಾನು ಎಲ್ಲ ಒಳ್ಳೆಯ ವಿಷಯಗಳನ್ನು ಗೌರವಿಸುತ್ತೇನೆ ಮತ್ತೆ ಒಳ್ಳೆಯ ವಿಷಯಗಳನ್ನು ಕಲಿತರೂ ತಪ್ಪಿಲ್ಲ ಎಂದರು.