ಕಿಚ್ಚ ಸುದೀಪ್ ನೇತೃತ್ವದ ತಂಡದಲ್ಲಿ ಪ್ರದೀಪ್, ಜೆಕೆ, ಕೃಷ್ಣ, ಚಂದನ್, ರಾಜೀವ್, ನಿರೂಪ್, ಪ್ರತಾಪ್, ಅರ್ಜುನ್, ಸಚಿನ್, ಕರಣ್, ಮಂಜುನಾಥ್ ಮತ್ತು ಬಚ್ಚನ್ ಅವರನ್ನೊಳಗೊಂಡ ತಂಡವು ಅಮೋಘ ಪ್ರದರ್ಶನ ನೀಡಿತು. 130 ರನ್ಗಳ ಗುರಿಯನ್ನು ಬೆನ್ನಟ್ಟಿದ ಬುಲ್ಡೋಜರ್ಸ್ ಪರ ಸ್ಟಾರ್ ಬ್ಯಾಟ್ಸ್ಮನ್ ರಾಜೀವ್ ಹನು ಕೇವಲ 35 ಎಸೆತಗಳಲ್ಲಿ 69 ರನ್ ಸಿಡಿಸಿ 'ಪಂದ್ಯ ಪುರುಷ' ಪ್ರಶಸ್ತಿ ಪಡೆದರು. ಬೌಲಿಂಗ್ನಲ್ಲಿ ಎದುರಾಳಿಗಳನ್ನು ಕಟ್ಟಿಹಾಕಿದ ಪ್ರತಾಪ್ 'ಅತ್ಯುತ್ತಮ ಬೌಲರ್' ಗೌರವಕ್ಕೆ ಪಾತ್ರರಾದರು.