ರನ್ಯಾ ಪರವಾಗಿ ವಕೀಲ ಕೆ.ಚಂದ್ರಶೇಖರ ಬಂಧನ ಆದೇಶ ಹೊರಡಿಸುವುದಕ್ಕೆ ಪೂರಕವಾಗಿ ಡಿಆರ್‌ಐ ಪೆನ್‌ಡ್ರೈವ್ (ರನ್ಯಾ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗಿನ ವಿಡಿಯೊ ದಾಖಲೆ) ಆಧರಿಸಿದೆ. ಆದರೆ, ಅದನ್ನು ರನ್ಯಾ ಅವರಿಗೆ ಒದಗಿಸಲಾಗಿಲ್ಲ. ರನ್ಯಾ ಅವರನ್ನು ವಶಕ್ಕೆ ಪಡೆದಾಗಲೇ ಪಾಸ್‌ಪೋರ್ಟ್ ಜಫ್ತಿ ಮಾಡಿದ್ದು, ಅದು ಸದ್ಯ ವಿಶೇಷ ನ್ಯಾಯಾಲಯದ ಕಸ್ಟಡಿಯಲ್ಲಿದೆ. ಹೀಗಿರುವಾಗ ರನ್ಯಾ ದೇಶ ತೊರೆಯುವ ಸಂದರ್ಭ ನಿರ್ಮಾಣವಾಗುವುದಿಲ್ಲ ಎಂದರು. ತರುಣ್ ರಾಜು ಪರವಾಗಿ ವಾದಿಸಿದ ಹಿರಿಯ ವಕೀಲ ಹಷ್ಮತ್ ಪಾಷಾಕಾಫಿಪೋಸಾ ಅಡಿ ಬಂಧನವೇ ಅಕ್ರಮ ಎಂದು ಘೋಷಸಿಬೇಕು ಎಂದು ಕೇಂದ್ರ ಸರ್ಕಾರದ ಹಣಕಾಸು, ಕಂದಾಯ ಇಲಾಖೆ, ಆರ್ಥಿಕ ಗುಪ್ತಚರ ದಳದ ಜಂಟಿ ಕಾರ್ಯದರ್ಶಿಗೆ ಎರಡು ಬಾರಿ ಮನವಿ ಸಲ್ಲಿಸಿಲಾಗಿದೆ. ಆದರೆ, ಕೇಂದ್ರವು ಅದನ್ನು ಹೈಕೋರ್ಟ್‌ನ ಸಲಹಾ ಸಮಿತಿಗೆ ರವಾನಿಸಿ ಕೈಬಿಟ್ಟಿದೆ. ಇಲ್ಲಿ ಜಂಟಿ ಕಾರ್ಯದರ್ಶಿಯು ಪೋಸ್ಟ್ ಮ್ಯಾನ್ ರೀತಿಯಲ್ಲಿ ಕೆಲಸ ಮಾಡಿದ್ದಾರೆ. ತರುಣ್ ರಾಜು ಅವರು ದುಬೈನಲ್ಲಿ ರನ್ಯಾ ಜೊತೆ ವ್ಯವಹರಿಸಿದ್ದು, ಅಲ್ಲಿ ಮಾಡಿರುವ ಕೆಲಸಕ್ಕೆ ಅವರನ್ನು ಭಾರತದಲ್ಲಿ ಹೊಣೆ ಮಾಡಲಾಗದು ಎಂದು ವಾದ ಮಂಡಿಸಿದರು.