ಈ ವರ್ಷದ ಜ.09ರಂದೇ ತೆರೆಗೆ ಬರಬೇಕಿದ್ದ ವಿಜಯ್ ಚಿತ್ರಕ್ಕೆ ಸಾಕಷ್ಟು ಅಡಚಣೆಗಳು ಉಂಟಾಯಿತು. ಸೆನ್ಸಾರ್ ಮಂಡಳಿ ತಡೆಗೆ ಚಿತ್ರತಂಡ ಕೋರ್ಟ್ ಮೆಟ್ಟಿಲೇರಿದ್ದ ತಡ, ಅಂದಿನಿಂದ ಇಂದಿನವರೆಗೂ ಚಿತ್ರದ ಬಗ್ಗೆ ಒಂದೇ ಒಂದು ಸುದ್ದಿಯೂ ಬಂದಿರಲಿಲ್ಲ. ಚುನಾವಣೆ ಇದ್ದ ಕಾರಣ, ತಾತ್ಕಾಲಿಕವಾಗಿ ಸಿನಿಮಾ ರಿಲೀಸ್ ಮುಂದೂಡಿಕೆ ಆಗಿತ್ತು. ಆದರೆ, ಇಂತಹ ದಿನ ಎಂದು ಅಧಿಕೃತವಾಗಿ ಚಿತ್ರತಂಡಕ್ಕೆ ನಿರ್ಧರಿಸಲು ಸಾಧ್ಯವಾಗಿರಲಿಲ್ಲ. ಕಾರಣ, ಸೆನ್ಸಾರ್ ಮಂಡಳಿ ತಂದಿಟ್ಟಿದ್ದ ಪಜೀತಿ. ಆದರೀಗ, ಆಗೋದೆಲ್ಲ ಒಳ್ಳೆಯದಕ್ಕೆ ಎನ್ನುವಂತೆ ವಿಜಯ್ ಗೆಲುವಿನ ಬಳಿಕವೇ ಸಿನಿಮಾ ತೆರೆಗೆ ಬರಲಿದ್ದು, ಫ್ಯಾನ್ಸ್ಗಳಲ್ಲಿ ನಟನ ಕ್ರೇಜ್ ದುಪ್ಪಟ್ಟಾಗಿದೆ.