ಅಂದಹಾಗೆ, ನೂಕು ನುಗ್ಗಾಟದ ಸಮಯದಲ್ಲಿ ಕೆಲವರು ದುರುದ್ದೇಶದಿಂದ ನಿಧಿ ಅಗರ್ವಾಲ್ ಅನ್ನು ಮುಟ್ಟಲು ಪ್ರಯತ್ನಿಸಿದರು. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ತೀವ್ರ ಟೀಕೆಗೆ ಗುರಿಯಾಗಿದೆ. ಇದು ಅಭಿಮಾನವೇ ಅಲ್ಲ, ಇದೊಂದು ದುರಾಭಿಮಾನ ಎಂದು ಟೀಕಾಪ್ರಹಾರ ನಡೆಸಿದ್ದಾರೆ. ಅಭಿಮಾನದ ಹೆಸರಲ್ಲಿ ನಟಿಯನ್ನು ಈ ರೀತಿ ನಡೆಸುವುದು ನಮ್ಮ ನಾಗರಿಕ ಸಮಾಜದ ಲಕ್ಷಣವಲ್ಲ ಎಂದು ಇನ್ನು ಕೆಲವರು ಆಕ್ರೋಶದ ಮಾತುಗಳನ್ನಾಡಿದ್ದಾರೆ. ವೈರಲ್ ಆಗಿರುವ ವಿಡಿಯೋ ನೋಡಿ ನಿಮಗೆ ಏನು ಅನಿಸಿತು ಎಂಬುದನ್ನು ಕಾಮೆಂಟ್ ಮೂಲಕ ನಮ್ಮೊಂದಿಗೆ ಹಂಚಿಕೊಳ್ಳಿ, (ಏಜೆನ್ಸೀಸ್).