IANS ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಖುಷ್ಬೂ, ವಿಜಯ್ ಮತ್ತು ತ್ರಿಶಾ ಅವರ ವೈಯಕ್ತಿಕ ಜೀವನವನ್ನು ಸಾರ್ವಜನಿಕವಾಗಿ ಚರ್ಚಿಸುತ್ತಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. "ಜನರು ಈ ವಿಷಯವನ್ನು ಇಷ್ಟೊಂದು ದೊಡ್ಡದು ಮಾಡುತ್ತಿರುವುದು ನನಗೆ ಅರ್ಥವಾಗುತ್ತಿಲ್ಲ. ಅದು ಅವರ ವೈಯಕ್ತಿಕ ಜೀವನ. ಅವರ ಖಾಸಗಿ ವಿಚಾರಗಳಿಂದ ಯಾರಿಗಾದರೂ ತೊಂದರೆಯಾಗುತ್ತಿದೆಯೇ? ಇಲ್ಲ ಎಂದಾದರೆ, ಜನರು ಅವರ ಜೀವನದ ಬಗ್ಗೆ ಮಾತನಾಡುವುದು ಸರಿಯಲ್ಲ," ಎಂದು ಅವರು ನೇರವಾಗಿ ಹೇಳಿದ್ದಾರೆ.