2025ರ ಆಫ್ರಿಕಾದ ಅತ್ಯುತ್ತಮ ರೆಫರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಅರ್ಟನ್, ಈ ಬಾರಿ ಅಮೆರಿಕ, ಮೆಕ್ಸಿಕೊ ಮತ್ತು ಕೆನಡಾ ಜಂಟಿಯಾಗಿ ಆಯೋಜಿಸುತ್ತಿರುವ ಫಿಫಾ ವಿಶ್ವಕಪ್ನಲ್ಲಿ ಭಾಗವಹಿಸಲು ಸಜ್ಜಾಗಿದ್ದರು. ಆದರೆ ಮಿಯಾಮಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಅಮೆರಿಕದ ಕಸ್ಟಮ್ಸ್ ಮತ್ತು ಗಡಿ ರಕ್ಷಣೆ (CBP) ಅಧಿಕಾರಿಗಳು ತಡೆದು, ವಾಪಸ್ ಕಳುಹಿಸಿದ್ದಾರೆ.