ಬಾಂಗ್ಲಾದೇಶ ಮಾಜಿ ಪ್ರಧಾನಿ ಬೇಗಂ ಖಲೀದಾ ಜಿಯಾ(80) ನಿಧನ | Begum Khaleda Zia

 ಬಾಂಗ್ಲಾದೇಶದ ಮಾಜಿ ಪ್ರಧಾನಿ ಬೇಗಂ ಖಲೀದಾ ಜಿಯಾ
ಬಾಂಗ್ಲಾದೇಶದ ಮಾಜಿ ಪ್ರಧಾನಿ ಬೇಗಂ ಖಲೀದಾ ಜಿಯಾ
Published on
ಢಾಕಾ: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಬಾಂಗ್ಲಾದೇಶದ ಮಾಜಿ ಪ್ರಧಾನಿ ಬೇಗಂ ಖಲೀದಾ ಜಿಯಾ(Begum Khaleda Zia) ಇಂದು(ಡಿ. 30) ಬೆಳಗ್ಗೆ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. 
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷ, ಇಂದು ಬೆಳಗ್ಗೆ 6 ಗಂಟೆಗೆ ಢಾಕಾದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಪಕ್ಷದ ಅಧ್ಯಕ್ಷರಾದ ಬೇಗಂ ಖಲೀದಾ ಜಿಯಾ ಅವರು ನಿಧನರಾಗಿದ್ದಾರೆ ಎಂದು ತಿಳಿಸಿದೆ.
ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿಯಾಗಿದ್ದ ಜಿಯಾ, ಯಕೃತ್ತಿನ ಸಿರೋಸಿಸ್, ಸಂಧಿವಾತ, ಮಧುಮೇಹ, ಮೂತ್ರಪಿಂಡ, ಶ್ವಾಸಕೋಶಗಳು, ಹೃದಯ ಹಾಗೂ ಕಣ್ಣುಗಳ ಮೇಲೆ ಪರಿಣಾಮ ಬೀರುವ ದೀರ್ಘಕಾಲದ ಸಮಸ್ಯೆಗಳು ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಂದ ದೀರ್ಘಕಾಲದಿಂದ ಬಳಲುತ್ತಿದ್ದರು. ನ. 23ರಂದು ಹೃದಯ ಮತ್ತು ಶ್ವಾಸಕೋಶದಲ್ಲಿ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿ ಅಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. 
ಅವರ ಚಿಕಿತ್ಸೆಯನ್ನು ಹೃದ್ರೋಗ ತಜ್ಞ ಶಹಾಬುದ್ದೀನ್ ತಾಲೂಕ್ದರ್ ನೇತೃತ್ವದ ವೈದ್ಯಕೀಯ ತಂಡ ಸೇರಿ ಬಾಂಗ್ಲಾದೇಶ, ಯುಕೆ, ಯುಎಸ್, ಚೀನಾ ಹಾಗೂ ಆಸ್ಟ್ರೇಲಿಯಾದ ತಜ್ಞರು ನೋಡಿಕೊಳ್ಳುತ್ತಿದ್ದರು ಎನ್ನಲಾಗಿದೆ (ಏಜೆನ್ಸೀಸ್). 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net