ಈ ಕುರಿತು ಎಕ್ಸ್ನಲ್ಲಿ ಮಾಹಿತಿ ನೀಡಿರುವ ರಿಯೊ ಮೇಯರ್ ಎಡ್ವರ್ಡೊ ಕ್ಯಾವಲಿಯರ್, ಮೃತರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ್ದು, ನಗರದಲ್ಲಿ ಹೆಲಿಕಾಪ್ಟರ್ಗಳ ಅಪಘಾತದ ಸಂಖ್ಯೆ ಹೆಚ್ಚಾಗುತ್ತಿದೆ. ಸುರಕ್ಷತೆಯನ್ನು ಮೇಲ್ವಿಚಾರಣೆ ಮಾಡಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಬ್ರೆಜಿಲ್ನ ರಾಷ್ಟ್ರೀಯ ನಾಗರಿಕ ವಿಮಾನಯಾನ ಸಂಸ್ಥೆ(ANAC) ಯನ್ನು ಕೇಳಿಕೊಂಡಿದ್ದೇನೆ. ಅವರು ಸಂಪೂರ್ಣ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.