ಇರಾನ್ ಜೊತೆಗಿನ ಅಮೆರಿಕದ ಒಪ್ಪಂದಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬೆಂಬಲ ಸೂಚಿಸಿದ್ದರೂ, ಅದು ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. "ಇರಾನ್ ಮತ್ತು ಅಮೆರಿಕ ನಡುವಿನ ಒಪ್ಪಂದದಲ್ಲಿ ಲೆಬನಾನ್ ಸೇರಿಲ್ಲ" ಎಂದು ನೆತನ್ಯಾಹು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಇತ್ತ ಲೆಬನಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 112 ಮಂದಿ ಸಾವನ್ನಪ್ಪಿದ್ದು, 800ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದು ಇರಾನ್ ಅನ್ನು ಕೆರಳುವಂತೆ ಮಾಡಿದೆ.