ಐಪಿಎಲ್ ಇತಿಹಾಸದಲ್ಲಿ ಈ ಎರಡು ತಂಡಗಳ ಮುಖಾಮುಖಿ ದಾಖಲೆಗಳನ್ನು ನೋಡಿದಾಗ, ಸನ್ರೈಸರ್ಸ್ ಹೈದರಾಬಾದ್ ಮೇಲುಗೈ ಸಾಧಿಸಿರುವುದು ಕಂಡುಬರುತ್ತದೆ. ಒಟ್ಟು 26 ಪಂದ್ಯಗಳಲ್ಲಿ ಹೈದರಾಬಾದ್ 13 ಬಾರಿ ಗೆಲುವು ಸಾಧಿಸಿದ್ದರೆ, ಬೆಂಗಳೂರು ತಂಡವು 11 ಬಾರಿ ಜಯಭೇರಿ ಬಾರಿಸಿದೆ. ಒಂದು ಪಂದ್ಯ ಟೈನಲ್ಲಿ ಅಂತ್ಯಗೊಂಡಿದ್ದರೆ, ಮತ್ತೊಂದು ಪಂದ್ಯ ಫಲಿತಾಂಶವಿಲ್ಲದೆ ರದ್ದಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಬ್ಯಾಟಿಂಗ್ ಸ್ನೇಹಿ ಪಿಚ್ನಲ್ಲಿ ರನ್ ಮಳೆ ಹರಿಯುವುದು ಖಚಿತವಾಗಿದ್ದು, ಅಭಿಮಾನಿಗಳು ಹೈ-ವೋಲ್ಟೇಜ್ ಪಂದ್ಯವನ್ನು ಕಣ್ತುಂಬಿಕೊಳ್ಳಲು ಸಜ್ಜಾಗಿದ್ದಾರೆ(ಏಜೆನ್ಸೀಸ್).