ಲಿಂಗನಬಂಡಿಯಲ್ಲಿ ಜಾತ್ರಾ ಸಂಭ್ರಮ

ಯಲಬುರ್ಗಾ ತಾಲೂಕಿನ ಲಿಂಗನಬಂಡಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ಜಾತ್ರೆಗೆ ಸೇರಿರುವ ಭಕ್ತರು.
ಯಲಬುರ್ಗಾ ತಾಲೂಕಿನ ಲಿಂಗನಬಂಡಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ಜಾತ್ರೆಗೆ ಸೇರಿರುವ ಭಕ್ತರು.
Published on

ಪ್ರಮುಖ ಮುಖ್ಯಾಂಶಗಳು

  • ಹುಲಿಗೆಮ್ಮದೇವಿ

ಲಿಂಗನಬಂಡಿಯಲ್ಲಿ ಜಾತ್ರಾ ಸಂಭ್ರಮ

ಯಲಬುರ್ಗಾ: ತಾಲೂಕಿನ ಲಿಂಗನಬಂಡಿ ಗ್ರಾಮದ ಗುಡ್ಡದ ಮೇಲಿರುವ ಶ್ರೀ ಹುಲಿಗೆಮ್ಮದೇವಿ ಜಾತ್ರೋತ್ಸವಕ್ಕೆ ಸೋಮವಾರ ವಿಧ್ಯುಕ್ತ ಚಾಲನೆ ದೊರೆಯಿತು. 3 ದಿನಗಳ ಪರಿಷೆ ಇದಾಗಿದ್ದು, ಮೊದಲ ದಿನ ಅಪಾರ ಸಂಖ್ಯೆಯ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು.

ಬೆಳಗ್ಗೆ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅಲಂಕಾರ, ಕುಂಕುಮಾರ್ಚನೆ, ಪುಷ್ಪಾರ್ಚನೆ, ಅಭಿಷೇಕ ಸೇರಿ ನಾನಾ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.
ವಿಶೇಷವಾಗಿ ಬಾಳೆ ದಂಡಿಗೆ ಕಾರ್ಯಕ್ರಮ ಭಕ್ತರ ಗಮನ ಸೆಳೆಯಿತು. ದೇವಸ್ಥಾನ ಆವರಣದಲ್ಲಿರುವ ಐತಿಹಾಸಿಕ ಬಾವಿಯಲ್ಲಿ ಗಂಗಾಪೂಜೆ ನೆರವೇರಿಸಲಾಯಿತು. ಹುಲಿಗಿಯ ಶ್ರೀ ಹುಲಿಗೆಮ್ಮದೇವಿ ಜಾತ್ರೆ ಮಾದರಿಯಲ್ಲೇ ಇಲ್ಲಿಯೂ ಜಾತ್ರೆ ನಡೆಯುವುದು ವಿಶೇಷ.
ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಭಕ್ತರು ನಾನಾ ಹರಕೆ ಸಲ್ಲಿಸಿದರು. ದೇವಸ್ಥಾನ ಸುತ್ತಲೂ ಸ್ವಚ್ಛತೆ, ಕುಡಿವ ನೀರು ಮತ್ತು ಭಕ್ತರ ಅನುಕೂಲಕ್ಕಾಗಿ ಅಗತ್ಯ ವ್ಯವಸ್ಥೆ ಮಾಡಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net