Tea or Coffee : ಜಗತ್ತಿನ ಬಹುತೇಕ ಜನರ ದಿನ ಆರಂಭವಾಗುವುದೇ ಟೀ ಅಥವಾ ಕಾಫಿಯಿಂದ. ದಿನಕ್ಕೆ ಒಂದು ಕಪ್ ಕಾಫಿ-ಟೀ ಕುಡಿಯಲಿಲ್ಲ ಅಂದ್ರೆ ಆ ದಿನ ಏನೋ ಮಿಸ್ ಮಾಡಿಕೊಂಡಂತೆ ಜನರು ಚಡಪಡಿಸುತ್ತಾರೆ. ಒಂದು ಹೊತ್ತು ಊಟ ಬೇಕಾದರೂ ಬಿಡುತ್ತೇನೆ ಆದರೆ, ಟೀ-ಕಾಫಿ ಬಿಡುವುದಿಲ್ಲ ಎಂದು ಹೇಳುವ ಜನರು ಕೂಡ ನಮ್ಮ ನಡುವೆ ಇದ್ದಾರೆ. ದಿನಕ್ಕೊಂದು ಲೋಟ ಕಾಫಿ-ಟೀ ಕುಡಿಯದಿದ್ದರೂ ಸುಸ್ತು, ಚಡಪಡಿಕೆ ಹಾಗೂ ತಲೆ ನೋವು ಅನುಭವಿಸುವವರೂ ಇದ್ದಾರೆ. ಬೆಳಗ್ಗೆ ಎದ್ದ ತಕ್ಷಣ ಸ್ವಲ್ಪ ಕಾಫಿ ಅಥವಾ ಟೀ ಅನ್ನು ಗಂಟಲಿಗೆ ಸುರಿದರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಅಂತಾನು ಅಂತಾರೆ. ಅಷ್ಟೊಂದು ಜನಪ್ರಿಯವಾಗಿದೆ ಈ ಪಾನೀಯ.