ಚುನಾವಣೆ ಪಾರದರ್ಶಕವಾಗಿ ನಡೆದಿದ್ದರೆ ನಮ್ಮ ಪಕ್ಷ ಹೆಚ್ಚಿನ ಸ್ಥಾನ ಪಡೆಯುತ್ತಿತ್ತು: ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ | Mayawati

 Mayawati | ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಸಂಗ್ರಹ ಚಿತ್ರ
Mayawati | ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಸಂಗ್ರಹ ಚಿತ್ರ
Published on
ಪಟನಾ: ಬಿಹಾರ ವಿಧಾನಸಭಾ ಚುನಾವಣೆ ಪಾರದರ್ಶಕವಾಗಿ ನಡೆದಿದ್ದರೆ ತಮ್ಮ ಪಕ್ಷವು ಇನ್ನೂ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತಿತ್ತು ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಭಾನುವಾರ ( ನ 16) ಹೇಳಿಕೆ ನೀಡಿದ್ದಾರೆ.
ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಮಾಯಾವತಿ, ಬಿಹಾರದ ಕೈಮೂರ್ ಜಿಲ್ಲೆಯ ರಾಮಗಢ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಸತೀಶ್ ಕುಮಾರ್ ಸಿಂಗ್ ಯಾದವ್ ಅವರ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಮತಗಳ ಮರು ಎಣಿಕೆಯ ನೆಪ ಇಟ್ಟುಕೊಂಡು ನಮ್ಮ ಪಕ್ಷದ ಅಭ್ಯರ್ಥಿಯನ್ನು ಸೋಲಿಸಲು ಆಡಳಿತ ಮತ್ತು ಎಲ್ಲಾ ವಿರೋಧ ಪಕ್ಷಗಳು ಹುನ್ನಾರ ನಡೆಸಿದರು, ಚುನಾವಣೆಯೂದ್ಧಕ್ಕೂ ನಮ್ಮ ಪಕ್ಷದ ಕಾರ್ಯಕರ್ತರ ದೃಢಸಂಕಲ್ಪವು ಆ ಎಲ್ಲಾ ಪಿತೂರಿಯನ್ನು ವಿಫಲಗೊಳ್ಳುವಂತೆ ಮಾಡಿದೆ ಎಂದು ಮಾಯಾವತಿ ಆರೋಪಿಸಿದ್ದಾರೆ.
ಬಿಹಾರದ ಬೇರೆ ಬೇರೆ ಕಡೆಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಅವರ ಪ್ರತಿಸ್ಪರ್ಧಿಗಳಿಗೆ ಕಠಿಣ ಸ್ಪರ್ಧೆ ನೀಡಿ, ಸೋಲನುಭವಿಸಿದ್ದಾರೆ. ಚುನಾವಣೆಗಳು ಸಂಪೂರ್ಣವಾಗಿ ಮುಕ್ತ ಮತ್ತು ನ್ಯಾಯಯುತವಾಗಿದ್ದರೆ ಬಿಎಸ್ಪಿ ಖಂಡಿತವಾಗಿಯೂ ಹೆಚ್ಚಿನ ಕ್ಷೇತ್ರಗಳನ್ನು ಗೆಲ್ಲುತ್ತಿತ್ತು ಎಂದರು. ಈ ಸೋಲಿಗೆ ಪಕ್ಷದ ನಾಯಕರು, ಕಾರ್ಯಕರ್ತರು ದೃತಿಗೆಡುವ ಅವಶ್ಯಕತೆ ಇಲ್ಲ, ಮುಂಬರುವ ಚುನಾವಣೆಗಳಿಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುವಂತೆ ಮಾಯಾವತಿ ಸೂಚನೆ ನೀಡಿದ್ದಾರೆ.
ರಾಮಗಢ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಸತೀಶ್ ಕುಮಾರ್ ಸಿಂಗ್ ಯಾದವ್ 72,689 ಮತಗಳನ್ನು ಪಡೆದು, ತಮ್ಮ ಪ್ರತಿಸ್ಪರ್ಧಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಶೋಕ್ ಕುಮಾರ್ ಸಿಂಗ್​​ರನ್ನು ಕೇವಲ 30 ಮತಗಳ ಅಂತರದಿಂದ ಸೋಲಿಸಿದ್ದಾರೆ.
ಎನ್‌ಡಿಎಯ ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಯು, ತಲಾ 101 ಕ್ಷೇತ್ರಗಳಲ್ಲಿ ಸ್ಪರ್ಧಿಸಿ, ಸುಮಾರು 85 ಪ್ರತಿಶತದಷ್ಟು ಸ್ಟ್ರೈಕ್ ರೇಟ್​ನೊಂದಿಗೆ ಕ್ರಮವಾಗಿ 89 ಮತ್ತು 85 ಸ್ಥಾನ ಪಡೆದಿವೆ. 2020 ರಲ್ಲಿ 74 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ, ಈ ಬಾರಿ ಅದನ್ನು 89 ಹೆಚ್ಚಿಸಿಕೊಂಡಿದೆ. ನಿತೀಶ್ ಕುಮಾರ್ ಅವರ ಜೆಡಿಯು ಕಳೆದ ಸಲದ 43 ನ್ನು 85 ಹೆಚ್ಚಿಸಕೊಂಡಿದೆ.
ಈ ಸಲದ ಚುನಾವಣೆಯಲ್ಲಿ ಮಹಾಘಟಬಂಧನ್ ಕೇವಲ 34 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದು,ಇದರಲ್ಲಿ ಆರ್‌ಜೆಡಿ 25ರಲ್ಲಿ ಗೆಲುವು ಸಾಧಿಸಿದರೆ, ಕಾಂಗ್ರೆಸ್ ತಾನು ಸ್ಪರ್ಧಿಸಿದ 61 ಸ್ಥಾನಗಳಲ್ಲಿ ಕೇವಲ 6 ಸ್ಥಾನಗಳನ್ನು ಗೆದ್ದಿದೆ(ಏಜೆನ್ಸೀಸ್​).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net