ದೆಹಲಿ : ದೆಹಲಿ ಗಲಭೆ ಪ್ರಕರಣದ ಆರೋಪಿ ಜೆಎನ್‌ಯು ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ (Umar Khalid) ಗೆ ತನ್ನ ಸಹೋದರಿಯ ಮದುವೆಯಲ್ಲಿ ಭಾಗವಹಿಸಲು ದೆಹಲಿ ನ್ಯಾಯಾಲಯ ಗುರುವಾರ ಮಧ್ಯಂತರ ಜಾಮೀನು ನೀಡಿದೆ.ನ್ಯಾಯಾಲಯವು ಖಾಲಿದ್ ಅವರಿಗೆ ₹20,000 ವೈಯಕ್ತಿಕ ಬಾಂಡ್ ಮತ್ತು ಇಬ್ಬರು ಶ್ಯೂರಿಟಿಗಳನ್ನು ಸಲ್ಲಿಸಿದ ನಂತರ ಡಿಸೆಂಬರ್ 16 ರಿಂದ ಡಿಸೆಂಬರ್ 29 ರವರೆಗೆ ಮಧ್ಯಂತರ ಜಾಮೀನು ನೀಡಿದೆ.