ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನದ ದಿನದಂದೇ ಕೇಂದ್ರ ಗೃಹ ಸಚಿವ ಅಮಿತ್ ಷಾ(Amit Shah), ಅಕ್ರಮ ವಲಸಿಗರ ವಿರುದ್ಧ ಅಕ್ಷರಶಃ ಯುದ್ಧ ಘೋಷಿಸಿದ್ದಾರೆ. ಹೂಗ್ಲಿ ಜಿಲ್ಲೆಯ ಬಾಲಾಘರ್‌ನಲ್ಲಿ ನಡೆದ ಬೃಹತ್ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಷಾ, ಬಿಜೆಪಿ ಅಧಿಕಾರಕ್ಕೆ ಬಂದರೆ ಬಂಗಾಳದ ಗಡಿಯಲ್ಲಿ ಒಬ್ಬನೇ ಒಬ್ಬ ನುಸುಳುಕೋರನೂ ಪ್ರವೇಶಿಸಲು ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ.