ಶ್ರೀಕಾಕುಳಂ ಜಿಲ್ಲೆಯ ನರಸನ್ನಪೇಟೆಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ಸಿಎಂ ಎನ್.ಚಂದ್ರಬಾಬು ನಾಯ್ಡು, ಮೂರನೇ ಮಗುವಿನ ಜನನಕ್ಕೆ 30,000 ರೂ. ಮತ್ತು ನಾಲ್ಕನೇ ಮಗುವಿಗೆ 40,000 ರೂ. ನೀಡುವುದಾಗಿ ಭರವಸೆ ನೀಡಿದ್ದು, ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.