ಈ ವಿಡಿಯೋ ಪ್ರಸಾರವಾದ ಬೆನ್ನಲ್ಲೇ ರಾಜಕೀಯ ವಲಯದಲ್ಲಿ ಪರ-ವಿರೋಧದ ಚರ್ಚೆಗಳು ತೀವ್ರಗೊಂಡಿವೆ. ತೃಣಮೂಲ ಕಾಂಗ್ರೆಸ್ ಪಕ್ಷವು ಈ ಬೆಳವಣಿಗೆಯನ್ನು ತೀವ್ರವಾಗಿ ಖಂಡಿಸಿದ್ದು, ಅಜಯ್ ಪಾಲ್ ಶರ್ಮಾ ಅವರು ಕಾನೂನುಬಾಹಿರ ಅಥವಾ ಅಸಂವಿಧಾನಿಕವಾಗಿ ವರ್ತಿಸುತ್ತಿರುವುದು ಕಂಡುಬಂದರೆ ಅವರ ವಿರುದ್ಧ ನ್ಯಾಯಾಂಗ ಹೋರಾಟ ನಡೆಸುವುದಾಗಿ ತಿಳಿಸಿದೆ. ಮತ್ತೊಂದೆಡೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡ ಈ ವಿವಾದಕ್ಕೆ ಧ್ವನಿಗೂಡಿಸಿದ್ದು, ಶರ್ಮಾ ಬಿಜೆಪಿಯ ಏಜೆಂಟ್‌ನಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ(ಏಜೆನ್ಸೀಸ್).