ಇತ್ತೀಚಿನ ಬಜೆಟ್ ಮತ್ತು ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದ ಸೇರಿದಂತೆ ಹಲವಾರು ವಿಷಯಗಳ ಕುರಿತು ಸರ್ಕಾರವನ್ನು ಗುರಿಯಾಗಿಸಿಕೊಂಡು ರಾಹುಲ್ ಗಾಂಧಿ ಕಿಡಿ ಕಾರಿದ್ದಾರೆ. ಸಂಸತ್ತಿನಲ್ಲಿ ಮಾತನಾಡಿದ ರಾಹುಲ್, ವ್ಯಾಪಾರ ಒಪ್ಪಂದದ ಕುರಿತು ಪ್ರಧಾನಿ ಮೋದಿಯವರನ್ನು ಪ್ರಶ್ನಿಸುತ್ತಾ, ಭಾರತ ಯಾರಿಂದ ತೈಲ ಖರೀದಿಸಬೇಕು, ಖರೀದಿಸಬಾರದು ಎನ್ನುವ ನಿರ್ಧಾರವನ್ನು ಅಮೆರಿಕ ಏಕೆ ತೆಗೆದುಕೊಳ್ಳಬೇಕು ಎಂದು ಪ್ರಶ್ನಿಸಿದ್ದಾರೆ.